3:25 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ

12/08/2024, 22:25

ಮಂಗಳೂರು(reporterkarnataka.com): ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎ ಫೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಅವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋ ಅವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ ಸಿಎ ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಜಯೇಂದ್ರ ಬಂದ್ಯಾನ್ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು