2:31 AM Saturday25 - January 2025
ಬ್ರೇಕಿಂಗ್ ನ್ಯೂಸ್
ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ… ಚಾರ್ಮಾಡಿ ಘಾಟಿ ಕಾಡ್ಗಿಚ್ಚು: ಅಗ್ನಿಶಾಮಕ‌ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶ್ರಮದಿಂದ ಬೆಂಕಿ… ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು… ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ… ಗೃಹಲಕ್ಷ್ಮೀ ಮೂಲಕ ಮಹಿಳೆಯರ ಸಬಲೀಕರಣ, ಮೈಕ್ರೋ ಫೈನಾನ್ಸ್ ಮೂಲಕ ಜೀವಹರಣ: ಕೇಂದ್ರ ಸಚಿವ… 7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ… ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ… ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ…

ಇತ್ತೀಚಿನ ಸುದ್ದಿ

ಬಾಂಗ್ಲಾ ದೇಶದ ಹಿಂದುಗಳ ರಕ್ಷಿಸಿ: ಬಿ.ಸಿ. ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಡಾ. ಪ್ರಭಾಕರ ಭಟ್

12/08/2024, 22:47

ಬಂಟ್ವಾಳ(reporterkarnataka.com): ಬಾಂಗ್ಲಾ ದೇಶದಲ್ಲಿ ಉದೇಶಪೂರ್ವಕವಾಗಿ ನರಹತ್ಯೆ ನಡೆಯುತ್ತಿದೆ. ಹಿಂದುಗಳ ವಿರುದ್ಧ ಪ್ರತಿಕಾರ ನಡೆಯುತ್ತಿದೆ. ಇದು ಅತ್ಯಂತ ದುಃಖದ ಸಂಗತಿ ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಹೆಣ್ಣು ಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಹಿಂದುಗಳನ್ನು ಕೊಂದು ವಿಕೃತಿಯನ್ನು ಮೆರೆಯುತ್ತಿದ್ದಾರೆ. ಭಾರಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವ ನರಹತ್ಯೆಯನ್ನು ಖಂಡಿಸುವುದು ಮಾತ್ರವಲ್ಲ ಹಿಂದುಗಳಿಗೆ ಸೂಕ್ತ ರಕ್ಷಣೆಯೊಂದಿಗೆ ಬೆಂಬಲ ನೀಡಬೇಕಾಗಿದೆ ಎಂದು ಅವರು ಬಿ.ಸಿ.ರೋಡಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನುಡಿದರು.
ಬಾಂಗ್ಲಾದೇಶದಲ್ಲಿ ಈಗ ಕೇವಲ ಶೇ. 8ರಷ್ಟು ಹಿಂದುಗಳು ಉಳಿದಿದ್ದಾರೆ. ಅವರ ಬೆಂಬಲಕ್ಕೆ ಯಾರೂ ಇಲ್ಲ. ಹಿಂದುಗಳಿಗೆ ಅನ್ಯಾಯ ಮಾಡಿದಾಗ ವಿಪಕ್ಷ ಪಕ್ಷಗಳು ಮೌನವಾಗಿವೆ. ಅದೇ ಪರಿಸ್ಥಿತಿ ಭಾರತದಲ್ಲಿಯೂ ನಿರ್ಮಾಣವಾಗುತ್ತಿದೆ. ಹಿಂದುಗನ್ನು ಸರ್ವನಾಶ ಮಾಡುವ ಪ್ರಯತ್ನ ನಿರಂತರ ನಡೆಯುತ್ತಿದೆ. ಹಿಂದುಗಳಿಗೆ ಬದುಕುವ ಹಕ್ಕು ಇಲ್ಲವೇ ಎಂದು ಅವರು ಪ್ರಶ್ನಿಸಿದರು.


ರವಿ ಅಸೈಗೋಳಿ ಪ್ರಾಸ್ತಾವಿಕವಾಗಿ ಮಾತನಾಡಿ ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿದರು.
ಭಯಾನಕ ರೀತಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹತ್ಯೆ ಮಾಡಲಾಗುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಭಾರತೀಯರೆಲ್ಲ ಬಾಂಗ್ಲಾದೇಶದ ಹಿಂದುಗಳಿಗೆ ಬೆಂಬಲವಾಗಿ ನಿಲ್ಲಬೇಕು. ಎಂದರು.
ಬಾಂಗ್ಲಾ ಸರಕಾರವು ಅಲ್ಲಿನ ಹಿಂದುಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ನಾಶ ಮಾಡಿರುವ ಮನೆ ಹಾಗೂ ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಹಿಂದು ಹಿತರಕ್ಷಣ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೊಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿತ್ತು. ಮಾನವ ಸರಪಳಿಯನ್ನು ರಚಿಸಿ ಪ್ರತಿಭಟಿಸಿ ಘೋಷಣೆಗಳನ್ನು ಕೂಗಿದರು.
ಹಿಂದೂ ಹಿತರಕ್ಷಣ ಸಮಿತಿಯ ಪ್ರಮುಖರಾದ ಕೆ. ಪದ್ಮನಾಭ ಕೊಟ್ಟಾರಿ, ಪ್ರಸಾದ್ ರೈ,ಕ. ಕೃಷ್ಣಪ್ಪ, ಸುಜಿತ್ ಕಲ್ಲಡ್ಕ, ರತ್ನಾಕರ ಶೆಟ್ಟಿ, ಡಾ. ಕಮಲಾ ಪ್ರಭಾಕರ್ ಭಟ್ , ಸುಲೋಚನಾ ಜಿ.ಕೆ. ಭಟ್, ಸಚಿನ್ ಮೆಲ್ಕಾರ್, ಚೇತನ್ ಕಡೇಶ್ವಾಲ್ಯ, ಸನತ್ ಕುಮಾರ್ ಅನಂತಾಡಿ, ಸದಾಶಿವ ಬರಿಮಾರು, ಅಶೋಕ್ ಶೆಟ್ಟಿ ಸರಪಾಡಿ, ಚೆನ್ನಪ್ಪ ಕೋಟ್ಯಾನ್ ಸುಧಾಕರ ಶೆಟ್ಟಿ, ಕೇಶವ ದೈಪಲ, ಜನಾರ್ದನ ಬೊಂಡಾಲ, ಸಾಂತಪ್ಪ ಪೂಜಾರಿ, ರವೀಂದ್ರ ಕಂಬಳಿ , ಪ್ರಭಾಕರ ಪ್ರಭು, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಕಮಲಾಕ್ಷ ಶಂಭೂರು , ರಶ್ಮಿತ್ ಶೆಟ್ಟಿ, ರಾಜಾರಾಮ್ ನಾಯಕ್, ಪುರುಷೋತ್ತಮ ಸಾಲಿಯಾನ್ , ತನಿಯಪ್ಪ ಗೌಡ, ಹರೀಶ್ ಪೆರಾಜೆ, ರಮೇಶ್ ರಾವ್ ಮಂಚಿ, ಸನತ್ ಕುಮಾರ್ ಅನಂತಾಡಿ ಮೊದಲಾದ ಸಂಘ ಪರಿವಾರದ ಹಲವು ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು