8:13 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಳೆಯಾಗಿ ತುಂಗಭದ್ರಾ ಜಲಾಶಯ ಮತ್ತೆ ತುಂಬಲಿದೆ; ರೈತರಿಗೆ ಯಾವುದೇ ತೊಂದರೆಯಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

13/08/2024, 16:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಹವಾಮಾನ ಮುನ್ಸೂಚನೆಯಂತೆ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುನಿರಾಬಾದ್ ಜಲಾಶಯದ ಕೊಚ್ಚಿ ಹೋದ ಗೇಟ್
ಸ್ಥಳ ಮಂಗಳವಾರ ಪರಿಶೀಲಿಸಿಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ಅಡಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ದುರಸ್ತಿಗಾಗಿ 50ರಿಂದ 60 ಟಿಎಂಸಿ ಅಡಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ದುರಸ್ತಿ ಕಾರ್ಯವು ಆಂದ್ರದ ಪರಿಣಿತ ತಜ್ಞ ಕನ್ನಯ್ಯ ನಾಯ್ಡು  ಅವರ ಮಾರ್ಗದರ್ಶದಲ್ಲಿ ನಡೆಯುತ್ತಿದೆ. ಇನ್ನೂ ನಾಲ್ಕು ದಿನದಳಲ್ಲಿ ಗೇಟ್ ಕೂರಿಸುವ ಕಾರ್ಯನಡೆಯುತ್ತದೆ ಎಂದು ತಿಳಿಸಿದರು.
ಹವಾಮಾನ ಮುನ್ಸೂಚನೆಯಂತೆ ಆ. 15ರ ನಂತರ ಪುನ: ಮಳೆ ಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ, ನಾನೇ ಬಂದು ಜಲಾಶಯಕ್ಕೆ ಬಾಗಿನ ಅರ್ಪಿಸುತ್ತೆನೆ ಎಂದರು.
*ಯಾರ ಮೇಲೂ ಗೂಬೆ ಕೂರಿಸುವುದಿಲ್ಲ:*
ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್, ಬೋಸರಾಜು, ಶಿವರಾಜ ತಂಗಡಗಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಎಂಎಲ್ಸಿ ಹಂಪನಗೌಡ ಬಾದರ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು