10:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟನೆ

14/08/2024, 17:49

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯ ನೆರ್ನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕವನ್ನು ಕೋಚಿಮುಲ್ ಶ್ರೀನಿವಾಸಪುರ ತಾಲ್ಲೂಕು ನಿರ್ದೇಶಕರಾದ ಎನ್ . ಹನುಮೇಶ್ ಅವರು ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕದ ಪ್ರತಿ ಯೂನಿಟ್ ದರ 2.5 ಲಕ್ಷ ಆಗುತ್ತಿದ್ದು, ಒಕ್ಕೂಟದಿಂದ ಶೇ.100% ರಿಯಾಯತಿ ದರದಲ್ಲಿ ಸಂಘಕ್ಕೆ ಸರಬರಾಜು ಮಾಡಲಾಗಿರುತ್ತದೆ. ಸಿವಿಲ್ ಕಾಮಗಾರಿ ನಿರ್ಮಾಣಕ್ಕಾಗಿ 50,000/- ರೂಗಳ ಸಹಾಯಧನವನ್ನು ನೀಡಿರುತ್ತಾರೆ. ಇದರ ಜೊತೆಗೆ ಒಕ್ಕೂಟದಿಂದ ಪ್ರತಿ ಲೀಟರ್‌ಗೆ 0.30 ಪೈಸೆಯಂತೆ ಸಂಘಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಈ ಮೊತ್ತದಲ್ಲಿ ಪ್ರತಿ ಲೀಟರ್‌ಗೆ 0.10 ಪೈಸೆಯಂತೆ ಹಾಲು ಕರೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು, ಉಳಿಕೆ 0.20 ಪೈಸೆ ಯಂತ್ರಗಳ ನಿರ್ವಹಣೆ ವೆಚ್ಚಕ್ಕಾಗಿ ವಿನಿಯೋಗಿಸಲು ಒಕ್ಕೂಟದಿಂದ ಸಂಘಕ್ಕೆ ನೀಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳನ್ನು ಸಂಘಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ.
ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ರಾಸುಗಳನ್ನು ಸಾಕಾಣಿಕೆ ಮಾಡಿ ತಮ್ಮ ಆರ್ಥಿಕ ಜೀವನ ಮಟ್ಟವನ್ನು ಉತ್ತಮಪಡಿಸಿಕೊಳ್ಳಲು ಹಾಗೂ ಸ್ವಾವಲಂಬಿಗಳಾಗಿ ಜೀವನ ನಡೆಸಲು ದಾರಿ ದೀಪವಾಗಿರುತ್ತದೆ.
ಕೋಚಿಮುಲ್ ಪ್ರಭಾರೆ ಪ್ರಧಾನ ವ್ಯವಸ್ಥಾಪಕರು(ಶೇ.ತಾಂ.) ಡಾ. |ಎ.ಸಿ.ಶ್ರೀನಿವಾಸ ಗೌಡ ರವರು, ಮಾತನಾಡಿ, ಸಂಘಗಳಲ್ಲಿ ವೈಜ್ಞಾನಿಕವಾಗಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳಲ್ಲಿ ಹಾಲು ಕರೆಯುವ ವ್ಯವಸ್ಥೆ ಮಾಡುವುದರಿಂದ ರಾಸುಗಳ ಆರೋಗ್ಯ, ಹಾಲಿನ ಗುಣಮಟ್ಟ, ಶುದ್ಧತೆ ಪರಿಣಾಮಕಾರಿಯಾಗಿ ಕಾಪಾಡಿ ಗ್ರಾಹಕರಿಗೆ ಪರಿಶುದ್ಧವಾದ ಹಾಲನ್ನು ಪೂರೈಕೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ರವರು, ನೆರ್ನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ರೆಡ್ಡೆಮ್ಮ ಮತ್ತು ಸತೀಶ್ ರೆಡ್ಡಿ ಹಾಗೂ ಶ್ರೀನಿವಾಸಪುರ ಉಪ ಕಚೇರಿಯ ವಿಸ್ತರಣಾಧಿಕಾರಿಗಳಾದ ಎನ್.ಶಂಕರ್, ಎಸ್.ವಿನಾಯಕ, ಜಿ.ಎನ್. ಗೋಪಾಲಕೃಷ್ಣಾ ರೆಡ್ಡಿ ಹಾಗೂ ಸಂಘದ ಅಧ್ಯಕ್ಷ ಪಿ.ಶ್ರೀನಿವಾಸಗೌಡ, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರು, ಸಿಬ್ಬಂದಿ ಮತ್ತು ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು