12:11 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

14/08/2024, 19:50

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬುಧವಾರ ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಚೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2023-24_ನೇ ಸಾಲಿನಲ್ಲಿ ದುಡಿಯುವ ಬಂಡವಾಳ 13,655.02 ಲಕ್ಷ ಹೊಂದಿದ್ದು, ರೂ. 3.33 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಎಸ್.ರಾಜು ಪೂಜಾರಿ, , ಶಶಿಕುಮಾರ್ ರೈ ಬಿ., ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಕೆ.ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ. ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ) ಗೋಪಾಲಕೃಷ್ಣ ಭಟ್ ಕೆ., ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಸಲಹೆಗಾರರಾದ ಅಶೋಕ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.
*ಸಾಧನೆಯ ಹಾದಿಯಲ್ಲಿ:*
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 11 ವರ್ಷದಿಂದ ಇ-ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಆರು ಬಾರಿ `ಉತ್ತಮ ಸಹಕಾರಿ ಸಂಘ’ ರಾಜ್ಯ ಪ್ರಶಸ್ತಿ, ವಿಮಾ ಕ್ಷೇತ್ರದಲ್ಲಿ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 9 ವರ್ಷ ಗಳಿಂದ “ವಿಮಾ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ ಆವಾರ್ಡ್ ಪೋರ್ ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ”ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಶೇ.100 ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಇದರಲ್ಲಿ ಶೇ.60 ರಷ್ಟು ಏಕ ಪೋಷಕರನ್ನು ಹೊಂದಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಿಂದ ಸ್ವಚ್ಚತಾ ಸಿಬ್ಬಂದಿಯವರೆಗೆ ಸಂಘದಲ್ಲಿ ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು 71ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 580ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತç ಚಿಕಿತ್ಸಾ ವೆಚ್ಚ ಹಾಗೂ 15,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸುವುದು. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 10 ವರ್ಷದಿಂದ ಆಯೋಜಿಸಿ ಸುಮಾರು 500 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ IAS/KAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು