2:44 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ

27/08/2021, 08:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ  ಎಲ್ಲ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಭೆ ಹೂವಿನಬಾವಿ ಗವಿಸಿದ್ದೇಶ್ವರ ದೇವಸ್ಥಾನದ ಪಕ್ಕದಲ್ಲಿ ನಡೆಸಲಾಯಿತು. 

ಇದೇ ಸಂದರ್ಭದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿ ಆಚರಿಸಲಾಯಿತು. ಜತೆಗೆ ರಕ್ಷಾಬಂಧನ್ ಸ್ನೇಹ ಬಂಧನ ಕಾರ್ಯಕ್ರಮ, ಪಾಮನಕಲ್ಲೂರು ಗ್ರಾಮ ಪಂಚಾಯಿತಿ  ಪ್ರಮುಖ ಕಾರ್ಯಕರ್ತರ ಜತೆ ಆತ್ಮಾವಲೋಕನ ಸಭೆ, ಮುಂಬರುವ ತಾಲ್ಲೂಕು ಪಂಚಾಯ್ತಿ ಜಿಲ್ಲಾ ಪಂಚಾಯ್ತಿ ಚುನಾವಣೆ ಕುರಿತು ಸಭೆ ನಡೆಸಲಾಯಿತು. 

ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದುಹೇಳಿದರು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ವಿಶ್ವನಾಥ ರೆಡ್ಡಿ ಅಮೀನಗಡ, ಸಂತೋಷ ರಾಜುಗುರು, ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತಹ ಎಲ್ಲ ಪ್ರಮುಖ ಕಾರ್ಯಕರ್ತರು ಜೊತೆ ಮಾತನಾಡಿ ಚರ್ಚೆ ಮಾಡಿದರು. ಇದೇ ಈ ಸಂದರ್ಭದಲ್ಲಿ   ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ , ಬಿಜೆಪಿ  ಮುಖಂಡರಾದ ಚಂದ್ರಕಾಂತ ಗೂಗೆಬಾಳ, ಶಿವಕುಮಾರ್ ವಟಗಲ್,  ಅಮರೇಗೌಡ 

ಚಿಲ್ಕರಾಗಿ, ಬಸವರಾಜಸ್ವಾಮಿ, ಹಸಮಕಲ್ ಗ್ರಾಮ ಪಂಚಾಯಿತಿ ಸದಸ್ಯರು  ಹಾಗೂ ಬಿಜೆಪಿ ಪ್ರಮುಖ ಮುಖಂಡರು, ಬೂತ್ ಅಧ್ಯಕ್ಷರು, ವಿವಿಧ ಮೋರ್ಚಾ ಪದಾಧಿಕಾರಿಗಳು  ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು