10:44 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಪಾತಾಳ ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ ಪ್ರದಾನ

15/08/2024, 23:20

ಮಂಗಳೂರು(reporterkarnataka.com): ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ಪ್ರಸಾದಕ್ಕೆ ಸಮನಾದುದು. ಈ ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಭಾವಿಸುವುದಾಗಿ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅಭಿಪ್ರಾಯಪಟ್ಟರು.
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶೇಣಿ ಪ್ರಶಸ್ತಿ-2024 ಸ್ವೀಕರಿಸಿ ಮಾತನಾಡಿದರು.
ಶೇಣಿ ಜತೆಗಿನ ಒಡನಾಟವನ್ನು ಸ್ಮರಿಸಿದ ಅವರು, ಆಟ-ಕೂಟಗಳಲ್ಲಿ ಶೇಣಿಯವರು ಇದ್ದರೆ ಸಹಕಲಾವಿದರು ಬಹಳ ಎಚ್ಚರಿಕೆಯಿಂದ ಅರ್ಥ ಹೇಳಬೇಕಿತ್ತು. ಅವರು ಸಹಕಲಾವಿದರ ಜತೆ ಪಾತ್ರಕ್ಕೆ ಒದಗುವ ಬಗೆ ಅಸಾಮಾನ್ಯವಾಗಿತ್ತು. ಹರಿದಾಸರಾಗಿದ್ದ ಅವರಿಂದ ಯಕ್ಷಗಾನದ ಮಾತುಗಾರಿಕೆಯ ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ಲಭಿಸಿದೆ. ಅವರಂಥ ಕಲಾವಿದರು ಇನ್ನಷ್ಟು ಹುಟ್ಟಿಬರಬೇಕು ಎಂದು ಆಶಿಸಿದರು.
ಕಾರ್ಯಕ್ರಮಕ್ಕೆ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಚಾಲನೆ ನೀಡಿದರು. ಶೇಣಿಯವರು ಯಕ್ಷಗಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದ ಮಹಾನ್ ಕಲಾವಿದ ಎಂದು ಅವರು ಹೇಳಿದರು. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಹಿರಿಯ ಹೋಟೆಲ್ ಉದ್ಯಮಿ ಜಯಪ್ರಕಾಶ್ ರಾವ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಹಿರಿಯ ಚಿಂತಕ ನಿತ್ಯಾನಂದ ಕಾರಂತ ಶುಭಾಶಂಸನೆ ಮಾಡಿದರು.
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಆರ್.ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅರ್ಥಧಾರಿ ಜಿ.ಕೆ.ಭಟ್ ಸೇರಾಜೆ ಶೇಣಿ ಸಂಸ್ಮರಣೆ ಮತ್ತು ಪಾತಾಳ ಅಭಿನಂದನಾ ನುಡಿಗಳನ್ನಾಡಿದರು. ಹರಿಕಥಾ ಪರಿಷತ್ ಅಧ್ಯಕ್ಷ ಕೆ.ಮಹಾಬಲ ಶೆಟ್ಟಿ ಕೂಡ್ಲು ಉಪಸ್ಥಿತರಿದ್ದರು. ಹಿರಿಯ ಅರ್ಥಧಾರಿ ಸರ್ಪಂಗಳ ಈಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು