4:13 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

17/08/2024, 10:45

ಮಂಗಳೂರು(reporterkarnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.‌ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.‌


ಆಸ್ಪತ್ರೆ ನೂತ ಶಸ್ತ್ರಚಿಕಿತ್ಸಾ ಕಟ್ಟಡಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯಾವ ಖಾಸಗಿ ಆಸ್ಪತ್ರೆಗಳಿಗು ಕಡಿಯಿಲ್ಲದಂತೆ ಅತ್ಯಂತ ಸುಸಜ್ಜಿತವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಸ್ಪೆಷಾಲಿಟಿ ಬ್ಲಾಕ್ ಅನ್ನ ನಿರ್ಮಿಸಲಾಗಿದೆ ಎಂದರು.‌
ಜಿಲ್ಲಾಸ್ಪತ್ರೆಯಾಗಿ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನ ಒದಗಿಸುವಲ್ಲಿ ಮಾದರಿಯಾಗಿದೆ. ಖಾಸಗಿ ಸಂಸ್ಥೆ ಕೆ.ಎಂ.ಸಿ ಯವರೊಂದಿಗೆ ಒಪ್ಪಂದದ ಮೂಲಕ ವೆನ್ಲಾಕ್ ಆಸ್ಪತ್ರೆ ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಚಿಕಿತ್ಸೆಗಳನ್ನ ಒದಗಿಸಿತ್ತಾ ಬಂದಿದೆ. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ ಎಂದರು.‌
ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನ ಅಳವಡಿಸಲಾಗಿದೆ. 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡಾ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ವೆನ್ಲಾಕ್ ಆಸ್ಪತ್ರೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲ ಸುತ್ತಮುತ್ತಲಿನ ಕರಾವಳಿ‌ ಹಾಗೂ ಮಲೆನಾಡು ಭಾಗದ ಹತ್ತಾರು ಜಿಲ್ಲೆಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಆರೋಗ್ಯ ಸಚಿವನಾಗಿ ವೆನ್ಲಾಕ್ ಆಸ್ಪತ್ರೆಗೆ ಅಗತ್ಯ ಎಲ್ಲ ನೆರವುಗಳನ್ನ ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.‌
ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡವು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ. ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೊ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.
ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಯಂತ್ರೋಪಕರಣಗಳ ಅಗತ್ಯತೆಯನ್ನು ಮನಗಂಡು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮುತುವರ್ಜಿಯಿಂದ ಸ್ಮಾರ್ಟ್‌ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ಮತ್ತು ಕೆ.ಎಂ.ಸಿ. ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು