7:33 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ

17/08/2024, 18:27

ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರ ಕಂಬ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿ ನಡೆಸಿಕೊಟ್ಟು ಮಾತನಾಡಿದರು.
ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಅವರು ನುಡಿದರು.
ಶಿಕ್ಷಕರ ಸಮಸ್ಯೆಗಳ ಸಮಾಲೋಚನೆ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಶ್ರಫ್ ಅತಿಥಿಯಾಗಿದ್ದರು.
ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ .ಜಿ . ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು