4:22 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಚುನಾಯಿತ ಸರಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ; ರಾಜೀನಾಮೆ ನೀಡಲಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

17/08/2024, 21:37

ಬೆಂಗಳೂರು(reporterkarnataka.com): ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.
*ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ*: ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು