6:27 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಆ.20ರಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಆರಂಭ: ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ

18/08/2024, 15:40

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ಕೋಲಾರ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ.
ಈ ಸಮಯದಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು.
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು8 ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ. ಎಲ್ಲಾ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ನಲ್ಲಿ Voter Helpline application ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 20 ಆಗಸ್ಟ್ 2024 (ಮಂಗಳವಾರ) ರಿಂದ 18 ಅಕ್ಟೋಬರ್ 2024 (ಶುಕ್ರವಾರ) ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ/ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸುವುದು.
ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ/ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳುವುದು. ನ್ಯೂನತೆಗಳ ಗುರುತಿಸುವಿಕೆ ಮತ್ತು ಅಂತಹ ನ್ಯೂನತೆಗಳನ್ನು ನಿವಾರಿಸಲು ಕಾರ್ಯತಂತ್ರ ಮತ್ತು ಕಾಲಾವಧಿಯನ್ನು ಅಂತಿಮಗೊಳಿಸುವುದು ಮತ್ತು ನಿಯಂತ್ರಣ ಕೋಷ್ಟಕದ (Control Table) ನವೀಕರಣ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು