10:09 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

18/08/2024, 19:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಂಜನಗೂಡು, ವರುಣ ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಿಳೆಯರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ್ದರು.
ಮೈಸೂರು ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಭಾವಚಿತ್ರವನ್ನು ಸುಡುವ ಮೂಲಕ ರಸ್ತೆ ತಡೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ
ಇದು ಬಿಜೆಪಿಯವರ ಪಿತೂರಿ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧವು ಇಂತಹದೇ ದೂರು ನೀಡಿದಾಗ ಏಕೆ ಕ್ರಮ ವಹಿಸಲ್ಲಿಲ್ಲ ರಾಜ್ಯಪಾಲರೇ ?ಎಂದು ಅವರ ವಿರುದ್ಧ ಗುಡುಗಿದರು.
ಖಾಸಗಿ ವ್ಯಕ್ತಿಗಳು ನೀಡಿದ ದೂರಿನ ಮೇಲೆ ಇಂತಹ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಇದರ ಹಾಗೂ ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಘಟನೆಯ ಬಗ್ಗೆ ವಿವರಿಸಿದರು.


ಮೈಸೂರು- ಊಟಿ ಹೆದ್ದಾರಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್,, ಮುಖಂಡರುಗಳಾದ ಇಂಧನ ಬಾಬು, ಕರುಳಪುರ ನಾಗರಾಜು, ನಾಗೇಶ್ ರಾಜ್, ಶಿವಣ್ಣ, ಮಂಜುನಾಥ್, ಶ್ರೀಧರ್, ಮಾರುತಿ, ಅಜ್ಗರ್, ಅಕ್ಬರ್ ಅಲಿ, ಮಾದಪ್ಪ, ಶಶಿರೇಖಾ ಕುರಿಹುಂಡಿ ರಾಜು, ಬಾಲರಾಜು, ನೀಲಿ ಸಿದ್ದು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು