1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ: ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ

19/08/2024, 22:30

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘದ ವತಿಯಿಂದ ನಗರದ ಕುದ್ರೋಳಿಯಲ್ಲಿ ಸ್ವಾತಂತ್ರ ದಿನಾಚರಣೆ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪುಷ್ಪರಾಜ್ ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹೋಟೆಲ್ ಉದ್ಯಮಿಯಾದ ಕೆ. ಸುಧಾಕರ್ ಆಳ್ವ ಅವರು ಭಾಗವಹಿಸಿದರು. ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಜರುಗಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಸಂಘದ ಸದ್ಯಸರು ಹಾಗೂ ಮಹಿಳಾ ಸಮಿತಿಯ ಸದ್ಯಸರಿಗೆ ಬಹುಮಾನಗಳನ್ನು ನೀಡಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗ್ರಾಮದ ಬೀದಿ ವ್ಯಾಪಾರಿಗಳಿಗೆ ಉದ್ಯಮಿಯಾದ ವಿವೇಕ್ ರಾಜ್ ಪೂಜಾರಿ ನೀಡಿರುವ ಕೊಡೆಗಳನ್ನು ವಿತರಣೆ ಮಾಡಲಾಯಿತು. ಸಂಘದ ಗೌರವ ಅಧ್ಯಕ್ಷ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್. ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಮಹಿಳಾ ಸಂಚಾಲಕಿತಿ ಸುಮನ್ ಸುನಿಲ್, ಸಹ ಸಂಚಾಲಕಿ ಬಾನುಮತಿ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಪುಷ್ಪರಾಜ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಶಿಲ್ಪಾ ಸನ್ಮಾನ ಪತ್ರ ವಾಚಿಸಿದರು. ಸಂಘದ ಅಧ್ಯಕ್ಷರ ಅಶೋಕ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು. ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು