8:23 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು