3:02 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆ

21/08/2024, 16:26

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.


ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಮಾಧವ ಸುವರ್ಣ ಅವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ರಾಜೇಶ್ ಶಾಂತಿ ಅವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ನೇಮಿರಾಜ್ ಪಿ , ನಿರ್ದೇಶಕರುಗಳಾದ ಜಿ. ಪರಮೇಶ್ವರ್ ಪೂಜಾರಿ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು