7:50 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ

21/08/2024, 20:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ಇಬ್ಬರ ಭಾವಚಿತ್ರಕ್ಕೂ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಅವರಂತೆ ಈ ಇಬ್ಬರು ಮಹಾನ್ ಚೇತನಗಳ ಗುರಿಯು ಒಂದೇ ಆಗಿದ್ದು ಸಮ ಸಮಾಜದ ನಿರ್ಮಾಣ ಹಾಗೂ ದೀನ ದಲಿತರ ಮತ್ತು ಹಿಂದುಳಿದ ವರ್ಗಗಳ ಆಶಾಕಿರಣಗಳಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಇಂದಿನ ಯುವ ಪೀಳಿಗೆ ಇವರ ಮಾರ್ಗದರ್ಶನ ಹಾಗೂ ತತ್ವ ಆದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಭಾಷಣಕಾರರಾಗಿ ವಿದ್ಯಾಸಾಗರ್ ಕದಂಬ ಹಾಗೂ ಪೃಥ್ವಿರಾಜ್ ಅವರು ಶ್ರೀ ನಾರಾಯಣ ಗುರು ಹಾಗೂ ದೇವರಾಜ್ ಅರಸು ಅವರ ಜೀವನ ಚರಿತ್ರೆ ಹಾಗೂ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು.


ಇದೇ ಸಂದರ್ಭ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಸತಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಸಹ ಮಾಡಲಾಯಿತು. ವಿವಿಧ ವಸತಿ ಶಾಲಾ ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಹಾಗೂ ಯೋಗ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಪೌರಾ ಯುಕ್ತ ನಂಜುಂಡಸ್ವಾಮಿ, ಡಿ ವೈ ಎಸ್ ಪಿ ರಘು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸ್ವರ್ಣ ಲತಾ, ಮುಖಂಡರಾದ ಕುರಟ್ಟಿ ಮಹೇಶ್, ಗಿರೀಶ್, ಪ್ರಕಾಶ್ ರಾಜೇ ಅರಸ್ ಸೇರಿದಂತೆ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು