10:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು