1:49 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದ ಪರೀಕ್ಷೆ: ಪಾರದರ್ಶಕ ಹಾಗೂ ನಕಲುಮುಕ್ತ ನಡೆಸಲು ಕ್ರಮ

22/08/2024, 14:21

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಆಗಸ್ಟ್ 27ರಂದು ಜಿಲ್ಲೆಯಲ್ಲಿ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು 4422 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್ ಒಳಪಡಿಸಲಾಗುವುದು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ಶುದ್ಧ ನೀರು, ಬೆಂಚ್, ಮಧ್ಯಾಹ್ನ ಬಿಸಿಯೂಟ, ಸಾರಿಗೆ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾ ದಿನದಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೆ ನಿರ್ವಹಿಸಬೇಕು. ತಪ್ಪಿದಲ್ಲಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದರೊಂದಿಗೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಂಗಳ ಅವರು ಮಾತನಾಡಿ ಪರೀಕ್ಷಾ ದಿನಗಳಂದು ಬೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವುದರೊಂದಿಗೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾಧೀನ ದಳಗಳ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಕ್ಯಾಮರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಕುರಿತು ನಿಗಾ ವಹಿಸಬೇಕು. ಬಾಡಿ ಕ್ಯಾಮೇರಗಳನ್ನು ಅಳವಡಿಸಲಾಗುತ್ತದೆ.
ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ವಿದ್ಯುತ್ ತೊಂದರೆಯಾಗದ ರೀತಿ ಜನರೇಟರ್ ಇಲ್ಲವೆ ಯು.ಪಿ.ಎಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆ ಕೊಠಡಿಯ ಹೊರಗಡೆಯ 200ಮೀ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದ್ದು, ಅದಕ್ಕೆ ಅವಶ್ಯಕವಾದ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಪೊಲೀಸ್ ಅಧಿಕಾರಿಗಳು ಸಹಕಾರ ಕೋರುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಮೂರ್ತಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರಿ ನಿಖಿಲ್ ಬಿ. ಹೆಸ್ಕಾಂ ಅಧಿಕಾರಿಗಳು, ಎಲ್ಲಾ ಬಿ.ಇ.ಒಗಳು, ಬಿ.ಆರ್.ಸಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು