7:20 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಎಸ್‌ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ

22/08/2024, 23:32

ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್‌ ‘ಗೆ ಇವತ್ತು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ ಮಾಡಿದರು.


ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಕ್ಯಾ. ಚೌಟ ಅವರು, ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಸಖ್ಯ ಯಾರ ಜತೆಗಿದೆ ಎಂಬುದನ್ನು ನಾವು ಹಲವಾರು ವರ್ಷಗಳಿಂದ ಹೇಳಿಕೊಂಡು ಬಂದಿದ್ದೇವೆ. ಆದರೆ, ಬಂಟ್ವಾಳದ ಜನತೆಗೆ ಇವತ್ತು ಇದರ ಅರಿವಾಗಿದೆ. ವಿಶೇಷವಾಗಿ ಪಿಎಫ್‌ಐನ ರಾಜಕೀಯ ಸಂಸ್ಥೆಯಾಗಿರುವ ಎಸ್‌ಡಿಪಿಐ ಕಾಂಗ್ರೆಸ್‌ ಜತೆಗೆ ಖುಲ್ಲಂಖುಲ್ಲಾವಾಗಿ ಹೊಂದಾಣಿಕೆ ಮಾಡಿಕೊಂಡು ಬಂಟ್ವಾಳದ ಮಹಾಜನತೆಗೆ ಮೋಸವನ್ನು ಮಾಡಿರುವ ಕಾಂಗ್ರೆಸ್‌ಗೆ ಈ ಸಂದರ್ಭದಲ್ಲಿ ನಾನು ಏನು ಹೇಳಬೇಕೆಂದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು