12:36 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಸಹೋದರನನ್ನೇ ಕೊಚ್ಚಿ ಕೊಂದ ಮೂವರು ಸಹೋದರಿಯರು; ಮಲಗಿದ್ದಲ್ಲೇ ಭೀಕರ ಹತ್ಯೆ

22/08/2024, 23:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.


ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಬೆಳ್ಳಂಬೆಳಗ್ಗೆಯೇ ರಕ್ತ ಸಂಬಂಧಿಗಳು ಕೊಚ್ಚಿ ಕೊಂದಿದ್ದಾರೆ.
ಆಸ್ತಿಗಾಗಿ ಸಹೋದರನ ಜೊತೆ ಮೂವರು ಸಹೋದರಿಯರು ಆಗಾಗ್ಗೆ ಗಲಾಟೆ ನಡೆಸುತ್ತಿದ್ದರು.
ಇಂದು ಬಾವನ ಜೊತೆಗೂಡಿ ಮೂವರು ಸಹೋದರಿಯರು ರಾಘವೇಂದ್ರ ಅವರ ಕೊಲೆ ಮಾಡಿದ್ದಾರೆ. ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಸಹೋದರನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು