11:47 PM Saturday21 - December 2024
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ…

ಇತ್ತೀಚಿನ ಸುದ್ದಿ

ಕ್ವಾಂಟಮ್ ಕಂಪ್ಯೂಟಿಂಗ್ ಜ್ಞಾನದಿಂದ ಭವಿಷ್ಯದ ಸವಾಲುಗಳಿಗೆ ಉತ್ತರ: ಡಾ. ತ್ಯಾಗರಾಜು ಜಿ.ಎಸ್.

23/08/2024, 13:33

ಮಂಗಳೂರು(reporterkarnataka.com): ಇಂದಿನ ವೇಗದ ಜಗತ್ತಿನಲ್ಲಿ ‘ಕ್ವಾಂಟಮ್ ಕಂಪ್ಯೂಟಿಂಗ್’ ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು ‘ಕ್ವಾಂಟಮ್ ಕಂಪ್ಯೂಟಿಂಗ್’ನ ಮಹತ್ವ ಹೆಚ್ಚಿಸಿದೆ. ಇದರಿಂದಾಗಿ ಸಂಕೀರ್ಣ ಸಮಸ್ಯೆಗಳನ್ನೂ ತ್ವರಿತ ಹಾಗೂ ಪರಿಪಕ್ವತೆಯಿಂದ ನಿರ್ವಹಿಸಲು ಸಾಧ್ಯವಾಗಿದೆ. ಹಾಗಾಗಿಯೇ ತಾಂತ್ರಿಕ ರಂಗದ ದಿಗ್ಗಜ ಕಂಪೆನಿಗಳ ಪೈಕಿ ಗೂಗಲ್ ಕೂಡಾ ‘ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ದಿಮತ್ತೆಯ ತಂತ್ರಜ್ಞರಿಗೆ ಹೊಸತನದ ಸವಾಲುಗಳಾಗಿ ಮಣೆ ಹಾಕುತ್ತಿದೆ. ಈ ನೆಲೆಯಲ್ಲಿ ಇಂದಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಉತ್ತರಿಸಲು ಸನ್ನದ್ಧರಾಗಿಸುವ ಜವಾಬ್ದಾರಿ ನಮಗಿದೆ ಎಂದು ಉಜಿರೆ ಎಸ್‌ಡಿಎಂಐಟಿಯ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ಪ್ರಾಧ್ಯಾಪಕ , ವಿಭಾಗ ಮುಖ್ಯಸ್ಥ ಡಾ. ತ್ಯಾಗರಾಜು ಜಿ.ಎಸ್. ಹೇಳಿದರು.
ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಸಹಯೋಗದಲ್ಲಿ ಕೆನರಾ ಇಂಜಿನಿರಿಂಗ್ ಕಾಲೇಜಿನಲ್ಲಿ ಗುರುವಾರ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಗುರುವಾರ ‘ಕ್ವಾಂಟಮ್ ಕಂಪ್ಯೂಟಿಂಗ್’ ಕುರಿತಂತೆ ಆರಂಭಗೊಂಡ ಮೂರು ದಿನಗಳ ಬೋಧಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ನಾಗೇಶ್ ಹೆಚ್. ಆರ್. ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಮುಖ್ಯಸ್ಥ ಡಾ. ಹೆಚ್. ಮನೋಜ್ ಗಡಿಯಾರ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಸಹ ಪ್ರಾಧ್ಯಾಪಕಿ ಡಾ. ಉಷಾ ಜಿ.ಆರ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕ ರಂಗನಾಥ್ ಕೆ. ವಂದಿಸಿದರು. ಸುಷ್ಮಾ ಎಂ.ಡಿ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನ ಕ್ವಾಂಟಮ್ ರಿಸರ್ಚ್ ಲ್ಯಾಬ್ ಸ್ಥಾಪಕ ಸಿಇಒ ದೊರೈ ಕಾರ್ತಿಗಣೇಶ್, ಮಂಗಳೂರು ಸೆವೆನ್ ಎಡ್ಜ್ ಪ್ರೈ.ಲಿ ಹಿರಿಯ ಪ್ರಬಂಧಕ ಪ್ರಶಾಂತ್ ಕುಮಾರ್ ಎ, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು