9:08 AM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಲಾರಿ ಮಾಲೀಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ

24/08/2024, 18:04

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರ ಇಂದು ಮೂರನೇ ದಿನಕ್ಕೆ ತಲುಪಿದೆ ಎಂದು ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ವಿ.ಶ್ರೀನಿವಾಸ್ (ಮಿಂಚು) ತಿಳಿಸಿದರು.
ಶಿಡಿಗಿನಮೊಳ ಬಳಿಯ ಜಾನಕಿ, ಬಸಾಯಿ ಸ್ಪಾಂಜ್ ಕಾರ್ಖಾನೆಗಳ ಎದುರು ನಡೆದಿರುವ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು.
ಕಳೆದ ಮೂರು ದಿನಗಳಿಂದ ಅಹೋರಾತ್ರಿ ನಾವು, ನಮ್ಮ ಸಂಘದ ಪದಾಧಿಕಾರಿಗಳು, ಸದಸ್ಯರು ಮುಷ್ಕರ ನಡೆಸಿದ್ದೇವೆ, ಈವರೆಗೆ ಜಿಲ್ಲಾಡಳಿತವಾಗಲಿ, ಸ್ಪಾಂಜ್ ಐರನ್ ಮಾಲೀಕರ ಸಂಘವಾಗಲಿ ನಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ನಡೆಯಲಿದೆ ಎಂದು ಹೇಳಿದರು.
ಓವರ್ ಲೋಡ್ ಲಾರಿಗಳನ್ನು ನಿಷೇಧಿಸಬೇಕು, ಸೀರಿಯಲ್ ಪ್ರಕಾರವಾಗಿ ಸ್ಥಳೀಯ ಲಾರಿಗಳಿಗೆ ಸರಕು ಸಾಗಣೆಗೆ ಅವಕಾಶ ನೀಡಬೇಕೆಂಬುದು ನಮ್ಮ ಇತರ ಪ್ರಮುಖ ಬೇಡಿಕೆಗಳು ಎಂದು ಅವರು ನುಡಿದರು.
ಸ್ಥಳೀಯವಾಗಿ ಅಂದಾಜು ಸಾವಿರದ ಐದುನೂರು ಲಾರಿಗಳು ಇದ್ದು, ನೂರಾರು ಲಾರಿಗಳಿಗೆ ಸರಕು ಸಾಗಣೆ ಸಿಗದೇ ಲಾರಿ ಮಾಲೀಕರು ಭಾರೀ ಪ್ರಮಾಣದ ನಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದ ಅವರು, ಲಾರಿಗಳ ಮಾಸಿಕ ಕಂತು ಕಟ್ಟಲಾಗದೇ, ಆರ್ಥಿಕ ಸಂಕಷ್ಟದಿಂದಾಗಿ ಈಗಾಗಲೇ ಹಲವು ಜನ ಲಾರಿ ಮಾಲೀಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
ಕಳೆದ ತಿಂಗಳು ಸಂಘದ ವತಿಯಿಂದ ಐದು ದಿನಗಳ ಕಾಲ ಹಗಲು ರಾತ್ರಿ ಶಾಂತಿಯುತ ಮುಷ್ಕರ ನಡೆಸಿ, ಸ್ಪಾಂಜ್ ಕಾರ್ಖಾನೆಗಳಿಗೆ ಒಳ-ಹೊರ ಹೋಗುವ ಲಾರಿಗಳನ್ನು ನಿಲ್ಲಿಸಲಾಗಿತ್ತು. ಆಗ ಜಿಲ್ಲಾಧಿಕಾರಿಗಳು ಹಾಗೂ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ, ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ಅಧ್ಯಕ್ಷರ ಮಧ್ಯಸ್ಥಿಕೆಯಲ್ಲಿ ಮಾತುಕತೆಗೆ ಬಂದಿದ್ದ ಸ್ಪಾಂಜ್ ಐರನ್ ಕಾರ್ಖಾನೆಗಳ ಮಾಲೀಕರ ಸಂಘ ಆರಂಭದಲ್ಲಿ ನಮ್ಮ ಬೇಡಿಕೆಗಳಿಗೆ ಒಪ್ಪಿದಂತೆ ಮಾಡಿ, ತದನಂತರ ಮಾತು ಬದಲಿಸಿ, ಈಗ ಏನಾದರೂ ಮಾಡಿಕೊಳ್ಳಿ ಎನ್ನುತ್ತಿದ್ದಾರೆ. ಹೀಗಾಗಿ ನಮಗೆ ಅನ್ಯಾಯ ಆಗಿದ್ದು, ಹೋರಾಟ ಮುಂದುವರೆಸಿದ್ದೇವೆ. ನಮ್ಮ ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರಗೊಳಸಲಾಗುವುದು ಎಂದು ಮಿಂಚು ಶ್ರೀನಿವಾಸ್ ತಿಳಿಸಿದ್ದಾರೆ.
ಉದ್ಯಮಿ, ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯ ಎಂ.ಪ್ರಭಂಜನ ಕುಮಾರ್, ಕಾಂಗ್ರೆಸ್ ಮುಖಂಡ ಬಿಆರೆಲ್ ಸೀನಾ, ಪ್ರವೀಣ ಕುಮಾರ್, ಎಂ.ಡಿ. ಫಯಾಜ್, ನಾಗರಾಜ, ಪೂಜಾದೇವಿ ಶ್ರೀನಿವಾಸುಲು, ರಾಂಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು