3:26 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್

27/08/2021, 21:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ  ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ.

ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬಾವಿಗೆ ಬಿದ್ದಿತ್ತು.ಬಾವಿ ಪಕ್ಕದಲ್ಲಿ ಮೇಯಲು ಹೋದ ದನ ಆಕಸ್ಮಿಕ ಕಾಲು ಜಾರಿ ಬಾವಿಗೆ ಬಿದ್ದಿತ್ತು. ತಕ್ಷಣ ಅಥಣಿ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಲಾಯಿತು. ತಕ್ಷಣ ಜಲ ವಾಹನ ಹಾಗೂ ಸಿಬ್ಬಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದರು. ಸುಮಾರು 30 x 40 ಅಳತೆಯ 90 ಪುಟ ಆಳವಿರುವ ಬಾವಿಯಲ್ಲಿ ಬಿದ್ದಿರುವ ಆಕಳನ್ನು ಸುಮಾರು ಒಂದು ತಾಸು ಇಪ್ಪತ್ತು ನಿಮಿಷಗಳ ಕಾಲ ಕಾರ್ಯಾಚರಣೆಯ ಬಳಿಕ ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ.  

ರಕ್ಷಣಾ ಕಾರ್ಯಾಚರಣೆಯಲ್ಲಿ ಅನಿಲ್ ಬಡಚಿ (ಪ್ರಮುಖ ಅಗ್ನಿಶಾಮಕ ), ನೀಲಪ್ಪ ಹೇರವಾಡೆ (ಅಗ್ನಿಶಾಮಕ ಚಾಲಕ), ಅಗ್ನಿ ಶಾಮಕರಾದ ಶಿವಾನಂದ ಪೂಜಾರಿ, ಸಂಜೀವ ಚೌಗಲಾ, ರವೀಂದ್ರ, ಸಂಗಮ್,  ಸುರೇಶ್ ಮಾದರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು