4:59 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ಡ್ಯುಯಲ್ ಸೆಲೆಬ್ರೇಷನ್: ಸಾಧನೆಯ ಮೈಲಿಗಲ್ಲು

26/08/2024, 18:53

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋಮವಾರ ಡ್ಯುಯಲ್ ಸೆಲೆಬ್ರೇಷನ್ (ದ್ವಿ ಆಚರಣೆ)) ನಡೆಸಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ವತಿಯಿಂದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ಕೇರ್ ಕೌನ್ಸಿಲ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಅವರನ್ನು ಶಾಲು, ಫಲ ಪುಷ್ಪಗಳಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ) ತನ್ನ ್ಲ ೩೦ ವರ್ಷ ಪೂರೈಸಿದ ಸಂದರ್ಭದಲ್ಲಿ ದೈಹಿಕ ಫಿಟ್‌ನೆಸ್ ಅಸೆಸ್‌ಮೆಂಟ್ ಮತ್ತು ಎಕ್ಸರ್ಸೈಸ್ ಪ್ರಿಸ್ಕ್ರಿಪ್ಷನ್ ಕುರಿತು ಎರಡು ದಿನಗಳ ಕಾರ್ಯಕ್ರಮವನ್ನು ಎಂ.ಎಸ್. ರಾಮಯ್ಯ ಕಾಲೇಜ್ ಆಫ್ ಫಿಸಿಯೋಥೆರಪಿ ಇದರ ಡಾ. ಸುಂದರ್ ಕುಮಾರ್ ವೇಲುಸಾಮಿ ಅವರು ಉದ್ಘಾಟಿಸಿದರು.
ಸನ್ಮಾನವನ್ನು ಸ್ವೀಕರಿಸಿದ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಮಾತನಾಡಿ ಫಾದರ್ ಮುಲ್ಲರ್ ಸಂಸ್ಥೆಯ ಕಾರ್ಯವೈಖರಿಯನ್ನು ಕೊಂಡಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕ ನಿರ್ದೇಶಕ ವಂ| ಪಾ| ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮಾತನಾಡಿ ನಮ್ಮ ಸಂಸ್ಥೆ ಆರೋಗ್ಯ ಶಿಕ್ಷಣಕ್ಕೆ ತನ್ನ ಬದ್ಧತೆಯನ್ನು ಹೊಂದಿದೆ. ಆನರಿಗೆ ಆರೋಗ್ಯ ವನ್ನು ನೀಡುವ ಸಂದರ್ಭದಲ್ಲಿ ನುರಿತ ವೈದ್ಯರುಗಳು ಹಾಘೂ ಇತರ ಸಿಬ್ಬಂದಿಯವರು ಒಂದು ತಂಡವಾಗಿ ಕೆಲಸ ಮಾಡಿ ಉತ್ತಮ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದಾರೆ ಎಂದರು. ವೇದಿಕೆಯಲ್ಲಿ ಗಣ್ಯರು ರೆ.ಫಾ. ಫೌಸ್ಟಿನ್ ಲೂಕಾಸ್ ಲೋಬೋ, ರೆ.ಫಾ. ಅಜಿತ್ ಬಿ.ಮಿನೇಜಸ್, ರೆ.ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ಡಾ. ಆಂಟನಿ ಸಿಲ್ವನ್ ಡಿಸೋಜಾ, ಡಾ. ಹಿಲ್ಡಾ ಫೆರ್ನಾಂಡಿಸ್, ಮತ್ತು ಪ್ರೊ.ಚೆರಿಶ್ಮಾ ಡಿಸಿಲ್ವಾ ಉಪಸ್ಥಿತರಿದ್ದರು. ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೀತಲ್ ವಿ ಪೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು