12:07 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; 530 ಕೇಂದ್ರಗಳಲ್ಲಿ  ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ

28/08/2021, 10:50

ಬೆಂಗಳೂರು(reporterkarnataka.com): ಸಿಇಟಿ ಪರೀಕ್ಷೆ (ಸಾಮಾನ್ಯ ಪ್ರವೇಶ ಪರೀಕ್ಷೆ) ಇಂದಿನಿಂದ(ಆ.28) 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ನಡೆಯಲಿದೆ. 

ಇಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ 6 ಕೇಂದ್ರಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದು ಕೊಳ್ಳಲಾಗಿದೆ ಎಂದರು.

ಪರೀಕ್ಷೆ ದಿನದಂದು ಗೃಹ ಇಲಾಖೆಯ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಕೇವಲ ಒಂದು ಗಂಟೆ 20 ನಿಮಿಷಗಳನ್ನು ಪ್ರತಿ ಪೇಪರ್‌ಗೆ ನೀಡಲಾಗಿರುತ್ತದೆ.ಒಟ್ಟಾರೆ ಪರೀಕ್ಷೆಯು 180 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಆ.30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು