7:40 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

27/08/2024, 23:59

ಶಿವಮೊಗ್ಗ(reporterkarnataka.com): ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್ ‘ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “2000ದ ನಂತರ ಜನಿಸಿದ ಜನರೇಷನ್ – Z ಎಂದು ಕರೆಯಲ್ಪಡುವ 18-24 ವರ್ಷದ ಯುವಕ- ಯುವತಿಯರು ಭಾರತೀಯ ಜನತಾ ಪಕ್ಷ ಸೇರಲು ಹುಮ್ಮಸ್ಸಿನಿಂದ ಇದ್ದಾರೆ. ಇಂತಹ ಯುವ ಪೀಳಿಗೆಯ ಆಸಕ್ತರನ್ನು ಪಕ್ಷದ ಸದಸ್ಯರನ್ನಾಗಿ ಭರಮಾಡಿಕೊಳ್ಳುವತ್ತ ನಾವೆಲ್ಲಾ ಒಟ್ಟುಗೂಡಿ ಕೆಲಸ ಮಾಡಬೇಕು. ವಿದ್ಯಾರ್ಥಿ ಸಮುದಾಯ ಯುವ ಪೀಳಿಗೆ, ಮಾತ್ರವಲ್ಲದೇ ಸಮಾಜದ ಎಲ್ಲಾ ಸಮುದಾಯ-ವರ್ಗದ ಹಾಗೂ ವಿಶೇಷವಾಗಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಈ ಅಭಿಯಾನ ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗುವಂತೆ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಪಕ್ಷವು ಶಿಸ್ತಿಗೆ ಹೆಸರುವಾಸಿಯಾಗಿದ್ದು, ಶ್ರೇಷ್ಟ ಮೌಲ್ಯ, ಸಿದ್ದಾಂತದ ಮೇಲೆ ನಮ್ಮ ಪಕ್ಷ ನಿಂತಿದೆ. ದೇಶದೆಲ್ಲೆಡೆ ನಮ್ಮ ಪಕ್ಷವು ವ್ಯಾಪಿಸಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕದೆ, ಹೊಸ ಮುಖಗಳಿಗೆ, ಯುವ ಮನಸ್ಸುಗಳಿಗೆ ಅವಕಾಶ ನೀಡುತ್ತಿದೆ. ಹೀಗಿರುವಾಗ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಮೂಲಕದ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.
ಸೆಪ್ಟಂಬರ್ 1ರಿಂದ ನಡೆಯಲಿರುವ ಸದಸ್ಯತ್ವ ಅಭಿಯಾನದಲ್ಲಿ ಮಿಸ್ಡ್ ಕಾಲ್, ಕ್ಯೂಆರ್ ಕೋಡ್, ನಮೋ ಆಪ್, ಮತ್ತು ಬಿಜೆಪಿ ವೆಬ್ ಸೈಟ್ ಮೂಲಕ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ವಿಶೇಷ ಅಭಿಯಾನದ ಮೂಲಕ ರಾಷ್ಟ್ರದಾದ್ಯಂತ ಗರಿಷ್ಠ ಸಂಖ್ಯೆಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯತ್ತ ನಾವೆಲ್ಲ ಕಾರ್ಯೋನ್ಮುಖರಾಗಬೇಕು ಎಂದು ಕ್ಯಾ. ಚೌಟ ಕಾರ್ಯಕರ್ತರಿಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು