7:35 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

28/08/2024, 01:49

ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಮೊದಲ ಆರೋಪಿ ಅಲ್ತಾಫ್​ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್​ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್​ ಅವರು ಹೇಳಿದ್ದಾರೆ.
ಬಂಧಿತ ಅಭಯನನ್ನು ನಾಳೆ ಗುರುವಾರ ಕೋರ್ಟಿಗೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ವಿಚಾರಣೆ ನಡೆಸಲಾಗುವುದು
ಎಂದು ಅವರು ನುಡಿದರು.ಎನ್ ಡಿಪಿಎಸ್ ಪ್ರಕರಣದಲ್ಲಿ ಅಭಯ್​ನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್​ಪಿ ನುಡಿದರು.
ಬಂಧಿತ ಆರೋಪಿ ಅಭಯ್ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ.
ಅಭಯ್ ಈ ಹಿಂದೆ ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಆತ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು