3:42 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕಲ್ಲಡ್ಕದಲ್ಲಿ 92ನೇ ವರ್ಷದ ಮೊಸರು ಕುಡಿಕೆ ಉತ್ಸವ: ಮನರಂಜಿಸಿದ ಟ್ಯಾಬ್ಲೋಗಳು; ಕೃಷ್ಣಲೋಕಕ್ಕೆ ಒಯ್ದ ಬಾಲಕೃಷ್ಣರ ದಂಡು

28/08/2024, 19:24

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಲ್ಲಡ್ಕ ಶ್ರೀರಾಮ ಮಂದಿರದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 92ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುದ್ದು ಕೃಷ್ಣರು ಹಾಗೂ ಶ್ರೀ ಕೃಷ್ಣ ದೇವರ ವೈಭವ ಪೂರ್ಣ ಶೋಭಾಯಾತ್ರೆಯು ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಸಂಪನ್ನಗೊಂಡಿತು. ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಯಶೋದೆ -ಕೃಷ್ಣರ ವೇಷಗಳು ಮನರಂಜಿಸಿದವು. ಶೋಭಾಯಾತ್ರೆಯಲ್ಲಿ ನೇತಾಜಿ ಯುವಕ ಮಂಡಲ, ವಿಶ್ವ ಹಿಂದೂ ಪರಿಷತ್ ಕಲ್ಲಡ್ಕ, ತ್ರಿಶೂಲ ಫ್ರೆಂಡ್ಸ್ , ಕುದ್ರೆಬೆಟ್ಟು ಮಣಿಕಂಠ ಯುವಶಕ್ತಿಯ ಟ್ಯಾಬ್ಲೋಗಳು ವಿಶೇಷ ಆಕರ್ಷಣೆಯಾಗಿದ್ದವು. ನಾಸಿಕ್ ಬ್ಯಾಂಡ್ ಸಹಿತ ವಿವಿಧ ವಾದ್ಯವೃಂದಗಳು , ಕುಣಿತ ಭಜನೆ ಶೋಭಾಯಾತ್ರೆಗೆ ವಿಶೇಷ ಮೆರುಗು ನೀಡಿತು. ಹನುಮಾನ್ ನಗರ , ನಿಟಿಲಾಪುರ ರಿಕ್ಷಾ ಪಾರ್ಕ್ ಗಳಲ್ಲಿ ಮೊಸರು ಕುಡಿಕೆಯನ್ನು ಪಿರಮಿಡ್ ರಚಿಸಿ ಯುವಕರು ಒಡೆಯುವ ಮೂಲಕ ಸಾಹಸ ಮೆರೆದರು. ಶ್ರೀರಾಮ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಶ್ವ ಹಿಂದೂ ಪರಿಷತ್ತು ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಮೊಸರು ಕುಡಿಕೆ ಉತ್ಸವದ ಸಂದೇಶ ಸಾರಿದರು.


ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಆಡಳಿತ ಮಂಡಳಿಯ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ , ಸುಜಿತ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ , ಕ. ಕೃಷ್ಣಪ್ಪ, ಹರೀಶ್ ಅಚಾರ್ಯ, ಜಯರಾಮ್ ಶೆಟ್ಟಿಗಾರ್, ಉತ್ತಮ ಪಳನೀರ್, ಡಾ. ಕಮಲಾ ಪ್ರಭಾಕರ ಭಟ್ , ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್. , ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯೆರ್ ಕಟ್ಟೆ, ಸುಲೋಚನಾ ಜಿ.ಕೆ. ಭಟ್ , ದಿನೇಶ್ ಅಮ್ಟೂರು, ಮೋಹನ್ ಪಿ.ಎಸ್. , ಜನಾರ್ದನ ಬೊಂಡಾಲ, ಆನಂದ ಶಂಭೂರು ಸೇರಿದಂತೆ ಅನೇಕ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು