2:33 PM Saturday10 - October 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು