5:26 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಸಂಸದ ಧ್ರುವನಾರಾಯಣ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

28/08/2024, 21:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ದಿವಂಗತ ಧ್ರುವ ನಾರಾಯಣ್ ಅವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಬುಧವಾರ ಅವರ ಅಭಿಮಾನಿ ಬಳಗದ ವತಿಯಿಂದ ನಂಜನಗೂಡು ಪಟ್ಟಣದ ಅಶೋಕಪುರಂ ನ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವ ನಾರಾಯಣ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.


ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ನಮ್ಮ ತಂದೆಯವರ ಸ್ಮರಣಾರ್ಥ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ನಿಜಕ್ಕೂ ಸಂತೋಷ ತಂದಿದೆ. ನಾನು ಕೂಡ ನಮ್ಮ ತಂದೆಯವರ ಹಾದಿಯಲ್ಲಿ ನಡೆದು ಅವರಂತೆ ನಾನು ಕೂಡ ತಮ್ಮಗಳ ಸೇವೆ ಮಾಡಿಕೊಂಡು ಬರುತ್ತೇನೆ. ಇದಕ್ಕೆ ತಮ್ಮ ಸಹಕಾರ ಬೆಂಬಲ ಬೇಕು ಅಲ್ಲದೆ ಈ ಶಾಲೆಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಮಾದರಿ ಶಾಲೆಯನ್ನಾಗಿ ಮಾಡುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜಸೇವಕ ಪದ್ಮನಾಭರಾವ್ ಮಾತನಾಡಿ, ಧ್ರುವನಾರಾಯಣ್ ಒಬ್ಬ ಅಪರೂಪದ ರಾಜಕಾರಣಿ. ನಾನು ಕಂಡ ಅತ್ಯುತ್ತಮ ರಾಜಕಾರಣಿಗಳಲ್ಲಿ ಇವರು ಕೂಡ ಒಬ್ಬರು. ಅವರು ಸಂಸದರಾಗಿ ಈ ಭಾಗದಲ್ಲಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಎಂದು ಅವರ ಕಾರ್ಯವೈಖರಿಯನ್ನು ಸ್ಮರಿಸಿದರು.
ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ವೇದಿಕೆ ಮೇಲಿನ ಗಣ್ಯರು ಸಮವಸ್ತ್ರ ವಿತರಿಸಿದರು. ಸಮವಸ್ತ್ರಗಳನ್ನು ಕೊಡುಗೆಯಾಗಿ ನೀಡಿದ ಅಶೋಕ ಪುರಂ ನ ಚಂದ್ರು ಸೇರಿದಂತೆ ವೇದಿಕೆ ಮೇಲಿನ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ನೃತ್ಯ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮ ರತ್ನಾಕರ, ಮಾಜಿ ಅಧ್ಯಕ್ಷ ಮುದ್ದು ಮಾದೇಗೌಡ, ಮುಖಂಡರುಗಳಾದ ಕುಮಾರ್, ಪ್ರಕಾಶ್, ಸಿದ್ದಪ್ಪ,ಸ್ವಾಮಿ, ಶ್ರೀನಿವಾಸ್, ರಾಜೇಶ್, ದೇವರಾಜು ಸೇರಿದಂತೆ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು