5:46 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಆಟೋ ಚಾಲಕರ ಬೃಹತ್ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ತಡೆ

29/08/2024, 18:41

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲು
ಎಲೆಕ್ಟಿಕಲ್‌ ಅಟೋರಿಕ್ಷಾಗಳಿಗೆ ನೀಡಿರುವ ಅನುಮತಿ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ಚಾಲಕರು ಮೆರವಣಿಗೆ ಮೂಲಕ ಪ್ರತಿಭಟನಾ ಸಭೆ ನಡೆಸಿದರು.


ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.
ಈ ಸಂಧರ್ಭದಲ್ಲಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.
ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದ.ಕ. ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.
ನಗರದಲ್ಲಿ ಏಳರಿಂದ ಒಂಬತ್ತು ಸಾವಿರ ರಿಕ್ಷಾ ಚಾಲಕರು ಬಾಡಿಗೆಗಾಗಿ ಪರಿತಪಿಸುತ್ತಿದ್ದಾರೆ. ರಿಕ್ಷಾ ಪಾರ್ಕ್ ನಲ್ಲಿ ಲೆಕ್ಕಕ್ಕಿಂತ ಹೆಚ್ಚು ರಿಕ್ಷಾ ನಿಂತರೆ ಪೋಲೀಸರು ಪ್ರಕರಣ ದಾಖಲಿಸುತ್ತಾರೆ. ಸುಮಾರು ಒಂಬತ್ತು ಸಾವಿರ ರಿಕ್ಷಾಗಳಿಗೆ 115 ಅಧಿಕೃತ ಪಾರ್ಕ್ ಇರುವುದು. ಹೀಗಿರುವಾಗ ಇಷ್ಟು ರಿಕ್ಷಾ ಗಳು ಪಾರ್ಕ್ ಮಾಡುವುದು ಎಲ್ಲಿ ಎಂದು ಪ್ರಶ್ನಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಲೋಕೇಶ್ ಶೆಟ್ಟಿ ಬಲ್ಲಾಳ ಬಾಗ್, ವಿಷ್ಣು ಮೂರ್ತಿ, ಅರುಣ್ ಕುಮಾರ್ ಮಾತನಾಡಿದರು.
ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು