ಇತ್ತೀಚಿನ ಸುದ್ದಿ
ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ
29/08/2024, 20:39
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಂಘದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ಪಟ್ಟಣದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್ ಗಾಣಿಗ ಸೇರಿದಂತೆ ಮತ್ತಿತರ ಗಣ್ಯರು ಸಂಘದ ನಾಮಫಲಕ ಹಾಗೂ ಶಿವಶರಣ ಗಾಣಿಗರ ಕಪ್ಪಣ್ಣ ಅವರ ಭಾವಚಿತ್ರವನ್ನು ಅನಾವರಣ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ರಾಜಶೇಖರ್ ಗಾಣಿಗ ಮಾತನಾಡಿ, ಸಂಘಟನೆಯಲ್ಲಿ ಶಕ್ತಿ ಇದೆ ಎನ್ನುವುದಕ್ಕೆ ಈ ಸಹಕಾರಿ ಕ್ಷೇತ್ರವೇ ಸಾಕ್ಷಿ. ಹಿಂದುಳಿದ ನಮ್ಮ ಸಮಾಜದ ವತಿಯಿಂದ ವಿವಿಧಡೆ ಇಂತಹ ಸೌಹಾರ್ದ ಸಹಕಾರಿ ಸಂಘಗಳನ್ನು ನಡೆಸುವ ಮೂಲಕ ನೂರಾರು ಕೋಟಿ ರೂಪಾಯಿಗಳ ವಹಿವಾಟು ನಡೆಸುತ್ತಾ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ನಂಜುಂಡೇಶ್ವರನ ಸಮಿತಿಯಲ್ಲಿ ನಮ್ಮ ಸಮಾಜದ ವತಿಯಿಂದ ಸೌಹಾರ್ದ ಸಹಕಾರಿ ಬ್ಯಾಂಕನ್ನು ಸಂತೋಷದಿಂದ ಉದ್ಘಾಟನೆ ಮಾಡುತ್ತಿದ್ದೇನೆ. ಇದು ಅಭಿವೃದ್ಧಿ ಪತದತ್ತ ಸಾಗಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಸಂಘದ ಉಪಾಧ್ಯಕ್ಷ ಬಸವರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನಲ್ಲಿ ಕೇವಲ ಹತ್ತು ಸಾವಿರ ಜನಸಂಖ್ಯೆ ಇರುವ ನಮ್ಮ ಸಮಾಜದ ವತಿಯಿಂದ 400 ಸದಸ್ಯರಿಂದ ಸುಮಾರು 7 ಲಕ್ಷ ಠೇವಣಿ ಸಂಗ್ರಹಿಸಿ ಸಂಘವನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ಹಾಗೂ ಸಮಾಜದ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶಂಕರ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಪ್ರಾಂತೀಯ ಹಾಗೂ ಅಭಿವೃದ್ಧಿ ಅಧಿಕಾರಿಗಳಾದ ಗುರುಪ್ರಸಾದ್ ಬಂಗೇರ, ಸುರೇಶ್, ಲೆಕ್ಕ ಪರಿಶೋಧಕರಾದ ಸಂತೋಷ್, ನಿರ್ದೇಶಕರುಗಳಾದ ಮಾದ ಶೆಟ್ಟಿ, ಸ್ವಾಮಿ, ರಾಮಚಂದ್ರು, ಮಹೇಶ್ ಸೇರಿದಂತೆ ಎಲ್ಲಾ ನಿರ್ದೇಶಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.