4:58 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು