10:55 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ

28/08/2021, 15:40

ಕೊಲ್ಕತ್ತಾ (Reporterkarnataka.com)

ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಭಿಷೇಕ್ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್(TMC)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 6 ರಂದು ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದ್ದು, ಅವರ ಪತ್ನಿ ರುಜಿರಾ ಅವರಿಗೂ ಇದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ.

ಮುಂದಿನ ತಿಂಗಳು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು