6:49 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

ಹಾಲಿವುಡ್ ವೆಬ್ ಸೀರಿಸ್ ಶೂಟಿಂಗ್ ವೇಳೆ ಅವಘಡ: ಬಾಲಿವುಡ್ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾಗೆ ಗಾಯ 

28/08/2021, 17:26

ಮುಂಬೈ(reporterkarnataka.com): ಖ್ಯಾತ ನಟರಾದ ಪ್ರಕಾಶ್ ರೈ ಹಾಗೂ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ನಡೆದಿದೆ. ಬಾಲಿವುಡ್ ಹಾಗು ಹಾಲಿವುಡ್  ನಟಿ ಪ್ರಿಯಾಂಕಾ ಚೋಪ್ರಾ ಅವರು ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ.

ಪ್ರಿಯಾಂಕಾ ಅವರ ಎಡಹುಬ್ಬಿ ಬಳಿ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಲಿವುಡ್ ನ ಸಿಟಾಡೆಲ್ ಎಂಬ ವೆಬ್ ಸೀರಿಸ್ ವೊಂದರಲ್ಲಿ ನಟಿಸುತ್ತಿದ್ದಾಗ ಪ್ರಿಯಾಂಕಾಗೆ ಅವಘಡ ಸಂಭವಿಸಿದೆ. ದೊಡ್ಡ ಬಜೆಟ್ ನ

ವೆನ್ ಸೀರಿಸ್ ನಲ್ಲಿ ಅವರು  ಪ್ರಮುಖವಾದ ಪಾತ್ರ ನಿಭಾಯಿಸುತ್ತಿದ್ದಾರೆ. ಶೂಟಿಂಗ್ ವೇಳೆ ಗಾಯವಾಗಿ ರಕ್ತಸ್ರಾವದ ಪೋಟೋವನ್ನು ಪ್ರಿಯಾಂಕಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿಟಾಡೆಲ್ ವೆಬ್ ಸರಣಿಯನ್ನು ಬ್ರಿಯಾನ್ ಕ್ರಿಕ್ ಹಾಗೂ ರೊಸ್ಸೊ ಸಹೋದರರು ನಿರ್ದೇಶಿಸುತ್ತಿದ್ದಾರೆ. ಈ ವೆಬ್ ಸರಣಿ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಆಗಲಿದೆ. ಬಹುತೇಕ ಹಾಲಿವುಡ್ ನಲ್ಲೇ ಬ್ಯುಸಿಯಾಗಿರೋ ಪ್ರಿಯಾಂಕಾ, ಹಿಂದಿಯಲ್ಲಿ ಕಲ್ಪನಾ ಚಾವ್ಲಾ ಬಯೋಪಿಕ್ ಹಾಗೂ ಶೀಲಾ ಜೀ ಲೇ ಜರಾ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು