9:24 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ: ಆನ್ಲೈನ್ ಟ್ರೇಡಿಂಗ್ ಜಾಲಕ್ಕೆ ಸಿಲುಕಿರುವ ಶಂಕೆ

02/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ತೀರ್ಥಹಳ್ಳಿಯ
ಯುವಕ ಶವ ಸೋಮವಾರ ತುಂಗಾ ನದಿಯಲ್ಲಿ ಪತ್ತೆಯಾಗಿದೆ.
ಇಂದಾವರ ಗ್ರಾಮದ ಜಯದೀಪ್ ( 24 ) ಮೃತಪಟ್ಟ ಯುವಕ.
ತೀರ್ಥಹಳ್ಳಿ ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ನಿನ್ನೆ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.

ಜಯದೀಪ್ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ. ಶನಿವಾರ ಬೆಳಗ್ಗೆ ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಯ ಸಮೀಪ ಬೈಕ್ ನಿಲ್ಲಿಸಿ ಆತ ಕಣ್ಮರೆಯಾಗಿದ್ದ. ನಂತರ ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನದಿಂದ ಪೋಲೀಸ್, ಅಗ್ನಿಶಾಮಾಕದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಆದರೆ ಸ್ವಲ್ಪ ದೂರದಲ್ಲಿರುವ ತುಂಗಾ ನದಿ ಸ್ಮಶಾನಕಟ್ಟೆ ಸಮೀಪ ಆತನ ಶವ ಸಿಕ್ಕಿದೆ.
ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆತ ಆನ್ಲೈನ್ ಟ್ರೇಡಿಂಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ ಎಂಬುದಾಗಿ ಮಾತು ಕೇಳಿ ಬಂದಿತ್ತು. ಒಟ್ಟಿನಲ್ಲಿ ಬದುಕಿ ಬಾಳ ಬೇಕಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು