11:29 AM Monday3 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್ತಾ ?

28/08/2021, 17:58

ಮಂಗಳೂರು (Reporterkarnataka.com)


ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚಿ ಹೊರಡಿಸಿದ್ದಾರೆ.

I.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ: 01-09-2021 ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿದೆ.

2. ಲಗ್ತ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಯನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಸಂಪೂರ್ಣ
ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ವಹಿಸಲಾಗಿದೆ.

3. ಕೇರಳ ರಾಜ್ಯದಿಂದ ಬರುವಂತಹ ವಿದ್ಯಾರ್ಥಿಗಳನ್ನು 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಿಸಲು ಹಾಗೂ ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ವೈದ್ಯಕೀಯ ಆರೈಕೆ ಕಲ್ಪಿಸಲು ಅನುಕೂಲವಾಗುವಂತೆ ವಸತಿ ಸಹಿತ ಕಾಲೇಜುಗಳಲ್ಲಿ ತಮ್ಮದೇ ಆದ ಪ್ರತ್ಯೇಕ ಪ್ರಶಸ್ತವಾದ ಸಕಲ ವ್ಯವಸ್ಥೆಯುಳ್ಳ ಕೋವಿಡ್ ಕೇರ್ ಸೆಂಟರ್ ಗಳನ್ನು ಕಡ್ಡಾಯವಾಗಿ ತೆರೆಯಲು ಕ್ರಮವಹಿಸುವುದು ಕ್ವಾರಂಟೈನ್ ನಲ್ಲಿರಿಸಿದ ವಿದ್ಯಾರ್ಥಿಗಳು 7 ದಿನಗಳ ನಂತರ RT-PCR ಟೆಸ್ಟ್ ಮಾಡಿಸಿ, ನೆಗಟಿವ್ ಪ್ರಮಾಣ ಪತ್ರದೊಂದಿಗೆ ತರಗತಿಗೆ ಹಾಜರಾಗುವುದು, ಜ್ವಾಲೆಂಟೈನ್ ನಲ್ಲಿರಿಸಿದ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ ನಿಂದಲೇ ಆನ್ ಲೈನ್ ತರಗತಿಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸುವುದು,

4. ಕೇರಳ ರಾಜ್ಯದಿಂದ ದಿನಂಪ್ರತಿ ಬರುವಂತಹ ವಿದ್ಯಾರ್ಥಿಗಳು ಪ್ರತೀ 7 ದಿನಗಳಿಗೊಮ್ಮೆ RT-CR ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.

5. ಕೇರಳ ರಾಜ್ಯದಿಂದ ದಿನಂಪ್ರತಿ ಬರುವಂತಹ ಬೋಧಕ ಬೋಧಕೇತರ ಸಿಬ್ಬಂದಿಗಳು ಕೋವಿಡ್ ಲಸಿಕೆ (2 ಡೋಸ್) ಪಡೆದಿದ್ದರೂ ಕೂಡಾ ಪ್ರತಿ 7 ದಿನಗಳಿಗೊಮ್ಮೆ RTICR ಟೆಸ್ಟ್ ಮಾಡಿಸಿ ನೆಗೆಟಿವ್‌ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.

6. ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು RTPCR ಟೆಸ್ಟ್ ಮಾಡಿಸಿ, ನೆಗಟಿವ್ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.

7. ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸುವುದು.

8. ಸರಕಾರದ ಪ್ರಮಾಣಿತ ಕಾರ್ಯಾಚರಣಾ ವಿಧಾನವು (SOP) ಪರಿಪಾಲನೆ ಆಗುತ್ತಿರುವ ಬಗ್ಗೆ ಮೇಲ್ವಿಚಾರಣೆ ನಡೆಸಲು ಈ

ಕೆಳಗಿನಂತೆ ಪರಿಶೀಲನಾ ತಂಡವನ್ನು ರಚಿಸಲಾಗಿದೆ.

ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು (ಸಂಪೂರ್ಣ ಮೇಲ್ವಿಚಾರಣೆ)
. ತಾಲೂಕು ಆರೋಗ್ಯಾಧಿಕಾರಿಗಳು
. ಕಾಲೇಜು ಪ್ರಾಂಶುಪಾಲರುಗಳು

9. ಪ್ರಥಮ ಪಿಯುಸಿಗೆ ಸಂಬಂಧಿಸಿ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಮುಕ್ತಾಯವಾದ ಬಳಿಕ ವಿದ್ಯಾಸಂಸ್ಥೆಯ ಮುಖ್ಯಸ್ಥರು ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪೂರ್ವಾನುಮತಿ ಪಡೆದು ಸೆಪ್ಟೆಂಬರ್ 15 ರಿಂದ ತರಗತಿ
ಪ್ರಾರಂಭಿಸುವುದು. (ಸರಕಾರದ SOP ನಿಬಂಧನೆಗೆ ಒಳಪಟ್ಟು)

10. ಪದವಿ ಹಾಗೂ ಸ್ನಾತ್ತಕೋತರ ತರಗತಿ ಪ್ರಾರಂಭಕ್ಕೂ ಮುನ್ನ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ಕೋವಿಡ್ ನಿಯಂತ್ರಣಕ್ಕಾಗಿ ಅಳವಡಿಸಿಕೊಳ್ಳಲಾದ ಪೂರ್ವ ತಯಾರಿ ಹಾಗೂ ಮುಂದಿನ ಯೋಜನೆಯೊಂದಿಗೆ ಜಂಟಿ ನಿರ್ದೇಶಕರು ಇಲಾಖೆಯವರಿಗೆ ಅರ್ಜಿ ಸಲ್ಲಿಸಿ ಸರ್ವಾನುಮತಿ ಪಡೆದು ಸಪ್ಟೆಂಬರ್ 15 ರಿಂದ ಕಾಲೇಜು ಪ್ರಾರಂಭಿಸಲು ಕ್ರಮ ವಹಿಸುವುದು.

ಇತ್ತೀಚಿನ ಸುದ್ದಿ

ಜಾಹೀರಾತು