7:30 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ

03/09/2024, 19:50

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂಕಿರಣ ನಡೆಯಿತು.
ಇದೇ ಸಂದರ್ಭದಲ್ಲಿ ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಾಯಿತು. ಇದರ ಸಾನಿಧ್ಯವನ್ನು ಸಟ್ಟರ ಮಠದ ಪೂಜ್ಯರು ನೆರವೇರಿಸಿ ಶಿಕ್ಷಣ ಮಟ್ಟವು ಇನ್ನೂ ಬೆಳೆಯಬೇಕಾಗಿದೆ ಬಾಹ್ಯವಾಗಿ ಕಲಿತು ಹಲವಾರು ಉನ್ನತ ಹುದ್ದೆಯಲ್ಲಿ ಹೋಗಿರತಕ್ಕಂತ ಜನರನ್ನ ನಾವು ತಿಳಿದುಕೊಂಡಿದ್ದೇವೆ. ಮೈಸೂರಿನ ವಿಶ್ವವಿದ್ಯಾಲಯವು ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ತೋರಿಸಿದೆ. ದಕ್ಷಿಣ ಭಾರತದಲ್ಲಿ ಈ ವಿಶ್ವವಿದ್ಯಾಲಯ ಪ್ರಾರಂಭವಾದಾಗಿನಿಂದ ಲಕ್ಷಾಂತರ ಜನರು ಪದವಿ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟದವರಿಗೆ ಹೋಗಿರಬಹುದು. ಎಂಜಿ ಸಿಜಿ ಮೆಮೋರಿಯಲ್ ಅಥಣಿ ತಾಲೂಕಿನಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದು ಒಂದು ವಿಶ್ವವಿದ್ಯಾಲಯಕ್ಕೆ ಹೆಸರು ಪಡೆದುಕೊಳ್ಳುವ ಶಕ್ತಿ ಹೊಂದಿದೆ. ಅದೇ ಮಾದರಿಯಲ್ಲಿ ಮರುಳ ಶಂಕರ ದೇವರನ್ನು ನೆನೆಸಿಕೊಂಡು ಅನುಭವ ದೃಷ್ಟಿಯಲ್ಲಿ ಸಂಸ್ಥೆ ಮತ್ತು ವಿಶ್ವವಿದ್ಯಾಲಯವನ್ನು ಬಾಬುರಾವ್ ಮಹಾರಾಜರು ಹೊನವಾಡ ಪರಶುರಾಮ ಮಹಾರಾಜರು ಅಡಲಟ್ಟಿ ತಮ್ಮ ಅನುಭವದ ಮಾತುಗಳನ್ನಾಡಿದರು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಅವರು ಸಾಹಿತ್ಯ ಮತ್ತು ವಿಶ್ವವಿದ್ಯಾಲಯ ಸಲ್ಲಿಸಿರುವ ಸೇವೆಯನ್ನು ಶ್ಲಾಘಸಿದರು.
ಎಂ.ಸಿ. ಗಂಗಾಧರ ಸ್ವಾಗತಿಸಿದರು. ಡಾ.ಬಸವರಾಜ್ ಮಠ ಇತಿಹಾಸ ಸಂಶೋಧಕರು ಪರ ಗೌಡ ಬಿರಾದರ್ ನಿವ್ರತ ಶಿಕ್ಷಕರು ಹಾಗೂ ಆದರ್ಶ ಶಿಕ್ಷಕರಾದ ಸದಾಶಿವ್ ಹೂ ಟಿ ಮಲ್ಲಿಕಾರ್ಜುನ ವಾಲಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಕ್ತ ವಿವಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.


ಪಿಯುಸಿ, ಐಟಿಐ ಮಹಿಳಾ ವಿದ್ಯಾರ್ಥಿನಿಯರನ್ನು ಸಹ ಸನ್ಮಾನಿಸಲಾಯಿತು ಸಾಯಂಕಾಲ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆದು ಸಂಗೀತ ನಾಟಕ ನೃತ್ಯ ವಿದ್ಯಾರ್ಥಿಗಳು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮವನ್ನು ಐಟಿಐ ಪ್ರಾಚಾರ್ಯರು ಮಹಿಳಾ ಕೆಎಸ್ಒಯು ವಿಭಾಗದ ಮುಖ್ಯಸ್ಥರು ನೆರವೇರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು