5:57 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು