5:34 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ

05/09/2024, 14:25

ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು