9:39 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಆಗಸ್ಟ್ ತಿಂಗಳ ವಿಜೇತರಾಗಿ ಶ್ರೀದೇವಿ ಹಾಗೂ ಧ್ವನಿ ವೈ.ಕೆ. ಆಯ್ಕೆ

09/09/2024, 12:08

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ಶ್ರೀದೇವಿ ಹಾಗೂ ಧ್ವನಿ ವೈ.ಕೆ. ಅವರು ಆಯ್ಕೆಯಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂರ್ ತಾಲೂಕಿನ ಐದುನಾಳು ಗ್ರಾಮ ಶ್ರೀದೇವಿಯು ಶಿವಕುಮಾರ್ ಹಾಗೂ ನಿರ್ಮಲಾ ಮಹಾಂತ ದಂಪತಿ ಪುತ್ರಿ. ಲಿಂಗಸುರ್ ಎಕ್ಸ್ಪರ್ಟ್ಪ ಪಬ್ಲಿಕ್ ಸ್ಕೂಲ್ ನಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ರಾಜ್ಯ ಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆದ ಸ್ಕೌಟ್ ಗೈಡ್ ನಲ್ಲಿ ಪ್ರಮಾಣ ಪತ್ರ ಪಡೆದಿದ್ದಾಳೆ. ಜಿಲ್ಲಾ ಮಟ್ಟದಲ್ಲಿ ನಡೆದ ಸಿರಿಗನ್ನಡ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ

. ಭರತನಾಟ್ಯದಲ್ಲಿ ಪ್ರಥಮ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ . ಇನ್ನು ಹಲವಾರು ಪ್ರಶಸ್ತಿ ಪತ್ರಗಳು ದೊರಕಿದೆ. ಸಿರಿಗನ್ನಡದವರು ನಡೆಸಿದ ಸ್ಪರ್ಧೆಯಲ್ಲಿ ಪ್ರಶಸ್ತಿ ಪತ್ರ ಹಾಗೂ ಎರಡು ಗೋಲ್ಡ್ ಮೆಡಲ್ ಪಡ್ದಿದ್ದಾಳೆ. ವಾಯ್ಸ್ ಆಪ್ ಆರಾಧನಾ ನಡೆಸುವ ಡೈಲಿ ಟಾಸ್ಕಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾಳೆ. ಲಿಂಗಸೂರ್, ಮಸ್ಕಿ ರಾಯಚೂರು, ಕೊಪ್ಪಳ, ಮಂಗಳೂರು ಹಾಗೂ ಮೈಸೂರು ಹಿಗೆ ತುಂಬಾ ಕಡೆ ತಮ್ಮ ಭರತನಾಟ್ಯ ಹಾಗೂ ಡ್ಯಾನ್ಸ್ ಕಾರ್ಯಕ್ರಮ ಕೊಟ್ಟಿದ್ದಾರೆ. ಮಂಗಳೂರಿನ ಅಭಿಮತ ಚಾನೆಲ್ ನಲ್ಲಿ ಕಾರ್ಯಕ್ರಮ ಕೊಟ್ಟಿದ್ದಾಳೆ. ಕರ್ನಾಟಕ ಜಾನಪದ ಪರಿಷತ್ , ದಕ್ಷಿಣ ಕನ್ನಡ
ಮೂಡಬಿದರೆ ತಾಲೂಕು ಘಟಕ ನಡೆಸಿದ ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ. ಶಿಕ್ಷಣ, ಕ್ರೀಡೆ ಹಾಗೂ ಭರತನಾಟ್ಯ ಅಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ.
ಧ್ವನಿ ವೈ .ಕೆ., ಮಧುರ ಮತ್ತು ಯಶವಂತ್ ಕುಮಾರ್ ಅವರ ಪುತ್ರಿ. ಆದಿತ್ಯ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಈಕೆ ಶ್ರೀ ಲಲಿತಾ ಕಲಾನಿಕೇತನ ಭರತನಾಟ್ಯ ಶಾಲೆಯಲ್ಲಿ ವಿದುಷಿ ರೇಖಾ ಜಗದೀಶ್ ಅವರ ಬಳಿ ಭರತನಾಟ್ಯವನ್ನು 4 ವರ್ಷಗಳಿಂದ ಕಲಿಯುತ್ತಿದ್ದಾಳೆ. ಕರ್ನಾಟಕ ಅಚೀವರ್ಸ್ , ಬುಕ್ ಆಫ್ ರೆಕಾರ್ಡ್ಸ್ , ಶಾಂತಲೆ ಪ್ರಶಸ್ತಿ, ಸಮಾಜ ಸೇವಾ ರತ್ನ ಪ್ರಶಸ್ತಿ ಮತ್ತು ಜಾಕಿ ಬುಕ್ ಆಫ್ ಟ್ಯಾಲೆಂಟ್ ಪ್ರಶಸ್ತಿಗಳನ್ನು ಗಳಿಸಿದ್ದಾಳೆ. ಈಕೆ ಅನೇಕ ವೇದಿಕೆಗಳಲ್ಲಿ ಏಕವ್ಯಕ್ತಿ ನೃತ್ಯ ಪ್ರದರ್ಶನ ಮತ್ತು ಗುಂಪು ನೃತ್ಯ ಪ್ರದರ್ಶನ ನೀಡಿದ್ದಾಳೆ. ಹಲವು ರಂಗ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ಮಾಡಿ ಗೌರವ ಮತ್ತು ಕಾಣಿಕೆಗಳನ್ನು ಪಡೆದಿದ್ದಾಳೆ. ಹಲವು ಕ್ರೀಡಾ ಸ್ಪರ್ಧೆಗಳಲ್ಲಿ ಕೂಡ ಭಾಗವಹಿಸಿದ್ದಾಳೆ. ಸುಮಾರು 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾಳೆ. ಧ್ವನಿಯು ಕೀಸಾ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ರಾಧೆಯಾಗಿ ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾಳೆ. ವಾಯ್ಸ್ ಆಪ್ ಆರಾಧನ ತಂಡದ ಸಕ್ರೀಯ ಸದಸ್ಯೆಯಾಗಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು