10:20 PM Thursday19 - September 2024
ಬ್ರೇಕಿಂಗ್ ನ್ಯೂಸ್
ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: 303.31 ಲಕ್ಷ ರೂ. ನಿವ್ವಳ ಲಾಭ

09/09/2024, 16:12

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24 ನೇ ಸಾಲಿನ 13ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಗರದ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.
ಸಂಘದ 2023-24ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್‌ ಅವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಮಾತನಾಡಿ, ಸಂಘವು ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.275 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 210 ಕೋಟಿಗೂ ಮಿಕ್ಕಿ ಸಾಲ ನೀಡುವ ಗುರಿಯನ್ನು ಹೊಂದಿದೆ ಎಂದರು.
ಇಂದು ನಮ್ಮ ಸಂಘದ ಪ್ರಗತಿಗೆ ಸದಸ್ಯರಾದ ತಾವುಗಳು ಕಾರಣ ನಿಮ್ಮ ಸಂಪೂರ್ಣ ಸಹಕಾರಕ್ಕೆ ನಾವುಗಳು ಸದಾ ಋಣಿಯಾಗಿ ಇರುತ್ತೇವೆ. ಅದೇ ರೀತಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ ಎಲ್ಲಾ ಸಿಬ್ಬಂದಿವರ್ಗದ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಮುಂದಕ್ಕೆ ಸಂಘವು ಹಾಕಿಕೊಂಡಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸಂಘದ ಅಭೂತಪೂರ್ವ ಪ್ರಗತಿಗೆ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಘವು ವರದಿ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ.
147.54 ಲಕ್ಷ ಷೇರು ಬಂಡವಾಳ, ರೂ.
22,494.98 ಲಕ್ಷ ಠೇವಣಿಯನ್ನು ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ.
17,848.39 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ.
23, 649.04 ಲಕ್ಷ ಹೊಂದಿದೆ. ವರದಿ ವರ್ಷಕ್ಕೆ ಸಂಘವು ರೂ.
303.31 ಲಕ್ಷ ನಿವ್ವಳ ಲಾಭಗಳಿಸಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. 15 ಡಿವಿಡೆಂಡ್ ಘೋಷಿಸಲಾಯಿತು.
ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇವರಿಂದ ಅತೀ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸುವ ಪ್ರಶಸ್ತಿಯನ್ನು ಸಂಘ ಪಡೆದಿರುತ್ತದೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಉತ್ತಮ ಸಹಕಾರಿ ಸಂಘ” ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
*ಪ್ರತಿಭಾ ಪುರಸ್ಕಾರ:*
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗೌರವಾನ್ವಿತ ಸ್ಥಾನ ಅಲಂಕರಿಸಿದ ಸಂಘದ ಸದಸ್ಯರಾದ ಡಾ. ಸೇಸಪ್ಪ ಕೆ., ಯೋಗಿಶ್ ಕೋಟ್ಯಾನ್, ಶೀನ ಪೂಜಾರಿ, ಸತೀಶ್ ಕುಂಪಲ, ಹರೀಶ ಪಿ.ಡಿ, ಜಯವಿಕ್ರಂ ಪಿ., ವಿಜಯ್ ಕುಮಾರ್, ಪುರುಷೋತ್ತಮ ಪ್ರಭು, ಹೇಮಂತ್ ಕುಮಾರ್ ಗರೋಡಿ, ಶೇಕ್ ಅಬ್ದುಲ್ ಲತೀಪ್ ಸಹೇಬ್, ಯು. ಐತಪ್ಪ ಶೆಟ್ಟಿಗಾರ್, ದಿನೇಶ್ ನಾಯಕ್, ಸದಾಶಿವ ಪೂಜಾರಿ, ಬಿ. ರಾಜಶೇಖರ ಶೆಟ್ಟಿ, ಪ್ರವೀಣ್ ಎಸ್, ನವಾಜ್ ಹಾಗೂ ಹರೀಶ್ ಅಡ್ಯಾರ್ ರವರನ್ನು ಸಂಘದ ಪರವಾಗಿ ಗೌರವಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಬಹುಮುಖ ಪ್ರತಿಭೆಯಾಗಿರುವ ಸಂಘದ ಸದಸ್ಯರ ಮಕ್ಕಳಾದ ಕುಮಾರಿ ಐಶ್ವರ್ಯ ಆರ್. ಪೂಜಾರಿ, ಮಾಸ್ಟರ್ ಹವೀಶ್ ಆರ್ ಪೂಜಾರಿ, ಮಾಸ್ಟರ್ ಪ್ರದ್ಯುನ್ ಕುಮಾರ್, ಯುಕ್ತಿಕ, ತಸ್ವಿ, ಪ್ರಣಮ್ಯ ಪಿ. ಕೋಟ್ಯಾನ್,
ಅರ್ಚನಾ ಯಶೋಧರ್, ರಮ್ಯಾ ರಾವ್, ಶ್ರಾವಣಿ, ಪ್ರತೀಕ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಾದ ದೀಕ್ಷಾ, ಸಲೋನಿ ಜಯರಾಮ್ ಕಾರಂದೂರ್, ಪಿ. ಅಜ್ಮತುಲ್ ಮುಹಿಝ್, ವೀಕ್ಷ ಸುಮನ್, ಲಿಶಲ್ ಡಿಸೋಜ, ಭವಿಷ್ಯ, ಸ್ವೀಝಲ್ ಜೋಷ್ನ ಗೊನ್ಸಾಲ್ವಿಸ್, ಶ್ರಾವ್ನ್ ಹೆರ್ವಿನ್ ಫೆರ್ನಾಂಡಿಸ್ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಆಕಾಂಕ್ಷ ಕೆ. ಪೂಜಾರಿ, ಪವನ್ ಎನ್, ನಿಶಿತಾ ಪಿ. ಆರ್., ಕಾರ್ತಿಕ್ ಎಚ್, ಎಸ್, ಲೊರೈನ್ ಜೇನ್ ಡಿ ಅಲ್ಮೇಡಾ, ಕುಮಾರಿ ಹಿತಶ್ರೀ, ಶಾರ್ವರಿ ಎಮ್, ಜತೀಶ್ ಕೃಷ್ಣ ಕೆ. ಎಸ್, ಅರ್ಜುನ್, ರೇಷ್ಮಾ ಎಸ್., ಹಾಗೂ ಸುಹಾಸ್ ಅವರನ್ನು ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್. ಕೊಂಡಾಣ, ಶ ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್., ಚಂದ್ರಾವತಿ, ಉಮಾವತಿ ಮತ್ತು ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಸ್ವಾಗತಿಸಿ, ಉಪಾಧ್ಯಕ್ಷರಾದ ನೇಮಿರಾಜ್ ಪಿ. ವಂದಿಸಿದರು. ಅಭಿನಂದನಾ ಪುರಸ್ಕಾರ ಕಾರ್ಯಕ್ರಮವನ್ನು ಸಹಾಯಕ ಪ್ರಬಂಧಕರಾದ ವಿಶ್ವನಾಥ ಅವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು