ಇತ್ತೀಚಿನ ಸುದ್ದಿ
ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ
10/09/2024, 16:25
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್ ರಸ್ತೆಯಲ್ಲಿರುವ ನಗರ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ವಿವಿಧ ಸಂಘಟನೆಗಳು ಸಾಥ್ ನೀಡಿದವು. ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದವು.
ಕೂಡಲೇ ಹಲ್ಲೆಕೋರರನ್ನ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.ನಗರ ಠಾಣೆ ಮುಂಭಾಗ ಆರೋಗ್ಯ ಸಿಬ್ಬಂದಿಗಳು ಘೋಷಣೆ ಕೂಗಿದರು.
ಸ್ಥಳದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್, ಡಿಸ್ಟ್ರಿಕ್ಟ್ ಸರ್ಜನ್ ಮೊಕ್ಕಾಂ ಹೂಡಿದ್ದರು.100ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.