ಇತ್ತೀಚಿನ ಸುದ್ದಿ
ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ
11/09/2024, 19:18
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ
ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು.
ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿದ್ದವು.
ಬೆಳಗ್ಗೆ 10 ಗಂಟೆಗೆ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದಂತೆ ಆ ಮಾರ್ಗವಾಗಿ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೊರನಾಡು ದೇಗುಲಕ್ಕೆ ತೆರಳವುದನ್ನು ಕಂಡು ಪ್ರತಿಭಟನಾಕಾರರು ನಮ್ಮ ನೋವು ನ್ಯಾಯಾಧೀಶರಿಗೂ ಕೇಳಲಿ ಎಂದರು.
ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆಯೇ? ಒತ್ತುವರಿ ತೆರವು ಮಾಡಿದ್ರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.