8:50 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ, ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮೀ ಚೌಧರಿ

13/09/2024, 19:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮೊದಲನೇ ಬಾರಿಗೆ ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಜಿಲ್ಲಾಧಿಕಾರಿಗೆ ಮಾಹಿತಿ ನೀಡಿ ಅಧಿಕಾರಿಗಳು ಕರೆಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಎಲ್ಲರಿಗೂ ಮಾಹಿತಿ ಹೋಗಿದೆ ಆದರೆ ಯಾರು ಬಂದಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ|| ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು.


ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ಹಕ್ಕಿ ಪಿಕ್ಕಿ ಕಾಲೋನಿಗೆ ಬುಧವಾರ ಭೇಟಿ ನೀಡಿ ಕುಂದುಕೂರತೆಗಳ ಬಗ್ಗೆ ಸಾರ್ವಜನಿಕರೊಂದಿಗೆಮಾಹಿತಿ ಪಡೆದು ಚರ್ಚಿಸಿ ಮಾತನಾಡಿದರು.
ಸ್ಥಳೀಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಹಕ್ಕಿ ಪಿಕ್ಕಿ ಜನಾಂಗಕ್ಕೆ ವಿದ್ಯಾರ್ಥಿ ವೇತನ, ಉಚಿತ ವಿದ್ಯಾಭ್ಯಾಸ ಇದೆ ಸಮಾಜ ಕಲ್ಯಾಣ ಇಲಾಖೆಯಿಂದ ಎಲ್ಲಾ ಸೌಲಭ್ಯಗಳು ಸಿಗುತ್ತದೆ. ಅವರಿಗೆ ಸರ್ಕಾರ ಸೌಲಭ್ಯಗಳ ಬಗ್ಗೆ ಅರಿವು ಇಲ್ಲ.
ಗ್ರಾಮ ಸಭೆ ನಡೆದಿಲ್ಲ, ಉದ್ಯೋಗ ಖಾತರಿ ಬಗ್ಗೆ ಮಾಹಿತಿ ಇಲ್ಲ. ಈ ಗ್ರಾಮದಲ್ಲಿ ಐದು ಜನ ಅಂಗವಿಕಲ ಮಕ್ಕಳು. ಆರೋಗ್ಯ ಇಲಾಖೆ ಕೆಲಸ ಮಾಡುತ್ತಿಲ್ಲ. ಮಹಿಳಾ ಮತ್ತು ಮಕ್ಕಳ ಇಲಾಖೆ ಈ ಗ್ರಾಮದ ಜನರು ಸ್ಪಂದಿಸುತ್ತಿಲ್ಲ.
*ಅಧಿಕಾರಿಗಳಿಗೆ ತರಾಟೆ;*
ಮಹಿಳಾ ಆಯೋಗದ ಅಧ್ಯಕ್ಷರು ನೇತೃತ್ವದ ತಂಡದ ಪ್ರವಾಸದ ಮಾಹಿತಿ ಇದ್ದರೂ ಸ್ಥಳಕ್ಕೆ ಬಾರದೆ ಇದುದ್ದನ್ನ ಕಂಡು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ತಾಲೂಕು ಮಟ್ಟದ ಅಧಿಕಾರಿಗಳನ್ನು ( ಹಕ್ಕಿ ಪಿಕ್ಕಿ ಕಾಲೋನಿಗೆ ) ಸ್ಥಳಕ್ಕೆ ಕರೆಸಿಕೊಂಡು ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಸಾರ್ವಜಿನಿಕರಿಂದ ಮಾಹಿತಿ ಪಡೆದು ಸೌಲಭ್ಯಗಳ ಬಗ್ಗೆ ಅರಿವು ಇಲ್ಲದ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ನೀವು ಗ್ರಾಮಕ್ಕೆ ಎಷ್ಟು ಸರಿ ಬೇಟಿ ನೀಡಿದ್ದೀರಾ , ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸದಿದ್ದರೆ ಇಲಾಖೆಯಿಂದ ಬರುವಂತಹ ಆದೇಶಗಳಿಗೆ ತಲೆ ಬಾಗಬೇಕಾಗುತ್ತದೆ ಎಂದು ಖಾರವಾಗಿ ನುಡಿದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ ಇದೇ ತಿಂಗಳು ೨೦ ರೊಂದು ಗ್ರಾಮವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದುಕೊರೆತೆಯ ಬಗ್ಗೆ ಚರ್ಚಿಸಲಾಗುವುದು ಮಾಹಿತಿ ನೀಡಿದರು.
ಕಳೆದ ಮೂರು ವರ್ಷದಿಂದ ವೈದ್ಯರಿಲ್ಲದೆ ಪರದಾಡುತ್ತಿದ್ದು, ಇಲ್ಲಿ ಸಶ್ರೋಷಕಿಯೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿಯನ್ನು ಕಂಡು ಬೇಸರ ವ್ಯಕ್ತಪಡಿಸಿದರು.
ಈ ಹಿಂದೆ ವೈದ್ಯರಿಲ್ಲದೆ ಮಗುವೊಂದು ಚಿಕಿತ್ಸೆ ಇಲ್ಲದೆ ಮೃತರಾಗಿದ್ದು, ಹೆರಿಗಾಗಿ ಆರೋಗ್ಯ ಕೇಂದ್ರಕ್ಕೆ ಹೋದರೆ ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿತ್ತಾರೆ ಎಂದು ಸಾರ್ವಜನಿಕರ ದೂರು ನೀಡಿದ್ದು , ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನ ಅತಿ ಶೀಘ್ರವಾಗಿ ನೇಮಿಸಲು ಬೇಕಾಗುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.
ಮಹಿಳಾ ಆಯೋಗದ ಸದಸ್ಯರಾದ ಗೀತಾ, ಮಮತಾ ರೆಡ್ಡಿ, ಶಾಂತಮ್ಮ,ಡಿಎಚ್‌ಒ ಡಾ||ಶ್ರೀನಿವಾಸ್,ಆರ್‌ಸಿಎಚ್‌ಒ ‌‌.ಡಾ|| ಚಂದನ್, ತಹಶೀಲ್ದಾರ್ ಜಿ.ಎನ್.ಸುದಿಂದ್ರ, ಇಒ ಎನ್.ರವಿ , ಟಿಎಚ್‌ಒ ಮಹಮ್ಮದ್ ಶರೀಫ್, ಡಾಕ್ಟರ್ ರೆಡ್ಡಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಂಜಲಮ್ಮ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಸಿಡಿಪಿಒ ನವೀನ್, ರಾಯಲ್ಪಡ್ ಗ್ರಾಮ ಪಂಚಾಯತಿ ಅಧ್ಯಕ್ಷ ಗಂಗಾಧರ್, ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು