9:22 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ನಂಜನಗೂಡು: ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ; ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕಾರ್ಯಕ್ರಮ

14/09/2024, 19:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೀಡುತ್ತಿರುವ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಮಾರು 30 ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂಜನಗೂಡು ನಗರದ ಎಪಿಎಂಸಿ ಆವರಣದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ಪೌರಕಾರ್ಮಿಕ ಚಿನ್ನಯ್ಯ ಉದ್ಘಾಟಿಸಿದರು. ಬಳಿಕ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಕೆಲಸ ಮಾಡುತ್ತಿರುವವರನ್ನು ಯಾರೂ ಗುರುತಿಸುತ್ತಿಲ್ಲ. ಹಾಗಾಗಿ ನಾವು ಹಳ್ಳಿಗಳಲ್ಲಿ ವ್ಯವಸಾಯ ಮಾಡುವ ರೈತ ಮಹಿಳೆಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಸಿಬ್ಬಂದಿಗಳು, ಪತ್ರಕರ್ತರು, ಪ್ರತಿನಿತ್ಯ ಹಳ್ಳಿ ಮತ್ತು ಪಟ್ಟಣವನ್ನು ಸ್ವಚ್ಛಗೊಳಿಸುತ್ತಿರುವ ಪೌರಕಾರ್ಮಿಕರು, ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸುಮಾರು 30 ಸಾಧಕರನ್ನು ಗುರುತಿಸಿ ಅವರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್, ಸಾಹಿತಿ ನಾರಾಯಣಸ್ವಾಮಿ, ರೈತ ಸಂಘದ ಮುಖಂಡ ಬಂಗಾರಸ್ವಾಮಿ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜುಕಿರಣ್, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು