2:14 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ: ದಾಳಿ, ದಬ್ಬಾಳಿಕೆ ವಿರುದ್ಧ ನಿರ್ಣಯ

14/09/2024, 23:20

ಸುರತ್ಕಲ್(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸುರತ್ಕಲ್ ವಲಯ ಮಟ್ಟದ ಬೀದಿಬದಿ ವ್ಯಾಪಾರಿಗಳ ಸಮಾವೇಶವು ಸುರತ್ಕಲ್ ನ ಕರ್ನಾಟಕ ಸೇವಾ ವೃಂದದ ವೇದಿಕೆಯಲ್ಲಿ ಜರುಗಿತು.
ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ಸಮಾವೇಶ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೀದಿ ವ್ಯಾಪಾರಿಗಳ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಲಾಗಿದೆ.


ದೂರದೃಷ್ಟಿತ್ವದ ಯೋಜನೆ, ಯೋಚನೆಗಳಿಲ್ಲದೆ ಟೈಗರ್ ಕಾರ್ಯಾಚರಣೆ ನಡೆಸಲಾಗಿದೆ. ಬೀದಿ ವ್ಯಾಪಾರ ವಲಯ ಘೋಷಣೆ ಮಾಡುವಾಗ ಬೀದಿ ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಅವೈಜ್ಞಾನಿಕವಾಗಿ ವಲಯ ಸ್ಥಾಪನೆಗೆ ಮುಂದಾಗಿದ್ದಾರೆ.
ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ 100ಕ್ಕೂ ಅಧಿಕ ಬೀದಿ ವ್ಯಾಪಾರಿಗಳಿದ್ದಾರೆ ಅವರಿಗಾಗಿ ಮಹಾನಗರ ಪಾಲಿಕೆಯ ಸುರತ್ಕಲ್ ವಲಯ -1 ಆಯುಕ್ತರ ಅಧ್ಯಕ್ಷತೆಯಲ್ಲಿ ಪಟ್ಟಣ ವ್ಯಾಪಾರ ಸಮಿತಿ ರಚನೆ ಮಾಡಬೇಕೆಂದು ಆಗ್ರಹಿಸಿದರು.ಟೈಗರ್ ಕಾರ್ಯಾಚರಣೆಯಲ್ಲಿ ವಶಪಡಿಸಲಾದ ಸರಕನ್ನು ವಾಪಸ್ ಕೊಡಬೇಕು, ಹಾನಿಗೊಳಗಾದ ವಸ್ತುಗಳಿಗೆ ಪರಿಹಾರ ನೀಡಿ ಸಮರ್ಪಕ ಬೀದಿ ವ್ಯಾಪಾರ ವಲಯ ರಚನೆ ಆಗುವವರೆಗೆ ಯಥಾಸ್ಥಿತಿ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್. ಎಸ್. , ಅಧ್ಯಕ್ಷರಾದ ಮುಜಾಫರ್ ಅಹ್ಮದ್ ಮಾತನಾಡಿದರು.
ಸಂಘದ ಹಿರಿಯ ಸದಸ್ಯರಾದ ಧನಂಜಯ ಸುರತ್ಕಲ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ವಿಜಯ್, ಭಾಸ್ಕರ್ ತಡಂಬೈಲ್, ಶೈಲಾ ಸಿಕ್ವೇರಾ, ಫೆಲಿಕ್ಸ್ ನಜರತ್, ಸಲಾಂ ಜನತಾಕಾಲನಿ, ಅಜೀಜ್ ಕೃಷ್ಣಾಪುರ, ಬಾಲಕೃಷ್ಣ, ಮೊಯ್ದಿನ್ ಎಂ ಎಸ್ ಬೈಕಂಪಾಡಿ, ಹರೀಶ್ ಬೈಕಂಪಾಡಿ,ಯಲ್ಲನ ಗೌಡ ಮುಂತಾದವರು ಉಪಸ್ಥಿತರಿದ್ದರು.ಹನೀಫ್ ಇಡ್ಯಾ ಸ್ವಾಗತಿಸಿ, ವಂದಿಸಿದರು.
ಸಮಾವೇಶದಲ್ಲಿ ಈ ಕೆಳಕಂಡ ನಿರ್ಣಯ ಕೈಗೊಳ್ಳಲಾಯಿತು
1. ಮಹಾನಗರ ಪಾಲಿಕೆಯ ಸುರತ್ಕಲ್ ವಲಯ-1 ರ ವ್ಯಾಪ್ತಿಯ ಎಲ್ಲಾ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತ್ಯೇಕ ಪಟ್ಟಣ ವ್ಯಾಪಾರ ಸಮಿತಿ ರಚಿಸುವುದು.
2. ⁠667ರ ಪಟ್ಟಿಯಲ್ಲಿರುವ ಸುರತ್ಕಲ್ ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ಕೂಡಲೇ ಐಡಿ ಕಾರ್ಡ್ ವಿತರಿಸಬೇಕು.
3. ಸುರತ್ಕಲ್ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ವ್ಯಾಪಾರಿಸ್ನೇಹಿ, ಗ್ರಾಹಕಸ್ನೇಹಿ ಬೀದಿ ವ್ಯಾಪಾರ ವಲಯ ರಚನೆ ಮಾಡಬೇಕು
4. ಬೀದಿ ವ್ಯಾಪಾರಿಗಳ ಮೇಲಿನ ದಾಳಿ, ದಬ್ಬಾಳಿಕೆ ನಿಲ್ಲಿಸಿ ಅವರ ಬದುಕುವ ಹಕ್ಕನ್ನು ರಕ್ಷಣೆ ಮಾಡಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸುವ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು