11:33 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ: ಮಾನವ ಸರಪಳಿ ನಡೆಸಿ ರಸ್ತೆ ತಡೆ

16/09/2024, 15:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು- ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಶಾಸಕ ಮುನಿರತ್ನ ಬಿಜೆಪಿ ಪಕ್ಷದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಧಿಕ್ಕಾರದ ಘೋಷಣಾ ಫಲಕಗಳನ್ನಿಡಿದ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಅವರ ಭಾವಚಿತ್ರ ಹಾಗೂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆಯಿಂದಾಗಿ ಕೆಲಕಾಲ ಮೈಸೂರು- ಊಟಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿ ಒಬ್ಬ ಜವಾಬ್ದಾರಿಯುತ ಶಾಸಕ ಈ ರೀತಿ ಜಾತಿ ಜಾತಿಗಳ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಸರ್ಕಾರ ಅವರನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ ಬಿಜೆಪಿ ಪಕ್ಷ ಮತ್ತು ಪಕ್ಷದ ವರಿಷ್ಠರು ಕೂಡಲೇ ಇವರನ್ನು ಪಕ್ಷದಿಂದ ಉಚ್ಚಾಟಿಸಿ ಶಾಸಕ ಸ್ಥಾನದಿಂದಲೇ ವಜಾಗೊಳಿಸ ಬೇಕು ಎಂದು ಒತ್ತಾಯಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಅಶೋಕ್ , ಸೇರಿದಂತೆ ಮುಖಂಡರುಗಳಾದ ನಂದಕುಮಾರ್, ಮಂಜುನಾಥ್, ದೊರೆಸ್ವಾಮಿ, ಶ್ರೀಧರ್, ಸೌಭಾಗ್ಯ, ಮೀನಾಕ್ಷಿ, ಶಿವಣ್ಣ, ಬಾಲರಾಜ್, ಪುಟ್ಟಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು