7:40 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

16/09/2024, 20:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಲಿತ ಹಾಗೂ ಒಕ್ಕಲಿಗ ಸಮುದಾಯಗಳ ಬಗ್ಗೆ ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅಸಭ್ಯ ಅಶ್ಲೀಲ ಮತ್ತು ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ಜನ ಸಂಗ್ರಾಮ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜನಸಂಗ್ರಾಮ ಪರಿಷತ್ ರಾಜ್ಯ ಗೌರವಾಧ್ಯಕ್ಷ ನಗರ್ಲೆ ವಿಜಯ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ನಂಜನಗೂಡು ಪಟ್ಟಣದ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.
ಬಿಜೆಪಿ ಪಕ್ಷದ ಹಾಗೂ ಶಾಸಕ ಮುನಿರತ್ನ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ನಗರ್ಲೆ ವಿಜಯಕುಮಾರ್ ಮಾತನಾಡಿ, ಘಟನೆಯನ್ನು ತೀವ್ರವಾಗಿ ಖಂಡಿಸಿ ಸ್ವಾತಂತ್ರ್ಯ ಬಂದು 77 ವರ್ಷಗಳೇ ಕಳೆದರು ಇಂತಹ ಆಧುನಿಕ ಯುಗದಲ್ಲೂ ಅಸ್ಪೃಶ್ಯತಾ ಆಚರಣೆ ಇನ್ನೂ ಜೀವಂತವಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಕೂಡಲೇ ಇಂತಹ ಅವಿವೇಕಿ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ನಮ್ಮ ಸಂಘಟನೆ ವತಿಯಿಂದ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದರು.
ಇದೇ ಸಂದರ್ಭ ತಾಲೂಕು ಕಚೇರಿಯ ಶಿರಸ್ತೆದಾರ್ ರಾಜು ಅವರ ಮೂಲಕ ಸರ್ಕಾರ ಹಾಗೂ ಬಿಜೆಪಿ ನಾಯಕರುಗಳಿಗೆ ಮನವಿ ಪತ್ರ ಸಲ್ಲಿಸಿದರು.
ಜನಸಂಗ್ರಾಮ ಪರಿಷತ್ ಮುಖಂಡರುಗಳಾದ ಮಹೇಶ್, ವಿನೋದ್, ಜಗದೀಶ್, ಶಿವರಾಂ, ಹೇಮಂತ್, ವಸಂತ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು