10:02 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

17/09/2024, 10:44

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 13ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ನಗರದ ಪಡೀಲ್ ಬೈರಾಡಿಕೆರೆ ಸಮೀಪದ ‘ಆತ್ಮಶಕ್ತಿ ಸೌಧ’ ದಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಹರೀಶ್ ಪಿ.ಡಿ ಉದ್ಘಾಟಿಸಿ ಮಾತನಾಡ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯನ್ನು ಮೂಡಿಸುವಲ್ಲಿ ಸಫಲತೆಯನ್ನು ಕಂಡಿದೆ ಎಂದು ಈ ಶಿಬಿರಕ್ಕೆ ಶುಭ ಹಾರೈಸಿದರು.
ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಪ್ ಡೆಂಟಲ್ ಸಾಯನ್ಸ್ ನ ದಂತ ವೈದ್ಯರಾದ ಡಾ. ಶಿಫಾಲಿ ಸಾಲಿಯಾನ್ ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಮುಂತಾದ ಸೇವೆಗಳು ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 73ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಶಿಬಿರವು ಸಂಘದ ಸದಸ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಶ್ರೀನಿವಾಸ್ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ. 10.5 ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್. ಕೊಂಡಾಣ,ಸೀತಾರಾಮ್ ಎನ್., ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್. ಚಂದ್ರಾವತಿ, ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಸಂಘದ ಸದಸ್ಯರಾದ ಸದಾನಂದ ಪೂಜಾರಿ, ಜಗದೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಾಯಕ ಪ್ರಬಂಧಕರಾದ ವಿಶ್ವನಾಥ ಅವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು